ವೊಡಾಫೋನ್ ಸಲ್ಲಿಸಿದ ಪ್ರಸ್ತಾವಣೆಯನ್ನು ನಿರಾಕರಿಸಿದ ಸುಪ್ರೀಂ
ದೂರಸಂಪರ್ಕ ಇಲಾಖೆ ಎಚ್ಚರಿಕೆ
Team Udayavani, Feb 17, 2020, 7:18 PM IST
ಹೊಸದಿಲ್ಲಿ: ದೂರ ಸಂಪರ್ಕ ಕಂಪನಿಗಳು ತಮ್ಮ ಬಾಕಿಗಳನ್ನು ಸಕಾಲಕ್ಕೆ ಪಾವತಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು, ಆದರೆ ನಿಗದಿತ ಸಮಯಕ್ಕೆ ಬಾಕಿಯನ್ನು ಪಾವತಿಸಲು ವಿಫಲವಾಗಿರುವ ವೊಡಾಫೋನ್‌ನ ಪ್ರಸ್ತಾಪವನ್ನು ನ್ಯಾಯಾಲಯ ತಿರಸ್ಕರಿಸಿದೆ.
ಸೋಮವಾರ ರಂದು 2,500 ಕೋಟಿ ರೂ. ಮತ್ತು ಶುಕ್ರವಾರದ ವೇಳೆಗೆ 1,000 ಕೋಟಿ ರೂ. ಪಾವತಿಸುವ ಪ್ರಸ್ತಾವನೆಯನ್ನು ವೊಡಾಫೋನ್ ಸಲ್ಲಿಸಿದ್ದು, ಇದನ್ನು ಸ್ವೀಕಾರ ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹಿರಿಯ ವಕೀಲ ಮುಕುಲ್ ರೋಹrಗಿ ವೊಡಾಫೋನ್ ಪರವಾಗಿ ಈ ಬೇಡಿಕೆಯನ್ನು ಸಲ್ಲಿಸಿದ್ದು, ಸೋಮವಾರ 2,500 ಕೋಟಿ ರೂ. ಮತ್ತು ಶುಕ್ರವಾರದ ವೇಳೆಗೆ 1,000 ಕೋಟಿ ರೂ. ಪಾವತಿಸಲು ಸಿದ್ಧರಿದ್ದೇವೆ ಆದರೆ, ಕಂಪನಿಯ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ರೋಹrಗಿ ಮನವಿ ಮಾಡಿದ್ದರು. ಆದರೆ ಈ ಪ್ರಸ್ತಾವನೆ ಅರ್ಜಿಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ ನಿರಾಕರಿಸಿದೆ.
ಒಟ್ಟು 4 ಸಾವಿರದ 729 ಕೋಟಿ ರೂಪಾಯಿ ಸ್ಪೆಕ್ಟ್ರಮ್ ಶುಲ್ಕಬಾಕಿ ಮತ್ತು 28 ಸಾವಿರದ 309 ಕೋಟಿ ರೂಪಾಯಿ ಪರವಾನಗಿ ಶುಲ್ಕ ಒಳಗೊಂಡಂತೆ ಸುಮಾರು 53 ಸಾವಿರದ 38 ಕೋಟಿ ರೂಪಾಯಿಗಳನ್ನು ವೊಡಾಫೋನ್ ಐಡಿಯಾ ಕಂಪೆನಿ ಸರಕಾರಕ್ಕೆ ಪಾವತಿಸಬೇಕಾಗಿದು, ಅದನ್ನು ಪಾವತಿಸದಿದ್ದರೆ ಮುಚ್ಚಿಸಲಾಗುವುದು ಎಂದು ದೂರಸಂಪರ್ಕ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ