ಜಿಡಿಪಿ ಅಂದಾಜು ಇಳಿಸಿದ ಆರ್ಬಿಐ : ಮುಂಬಯಿ ಶೇರು 192 ಅಂಕ ನಷ್ಟ
Team Udayavani, Apr 4, 2019, 4:55 PM IST
ಮುಂಬಯಿ : ಮುಂಗಾರು ಅನಿಶ್ಚಿತತೆಯ ನಡುವೆ ಆರ್ಬಿಐ 2019-20ರ ಜಿಡಿಪಿ ಬೆಳವಣಿಗೆಯ ಅಂದಾಜನ್ನು ಇಳಿಸಿರುವುದು, ಹಣಕಾಸು ನೀತಿಯಲ್ಲಿನ ತಾಟಸ್ತ್ಯ ಧೋರಣೆಯನ್ನು ಮುಂದುವರಿಸಲು ನಿರ್ಧರಿಸಿರುವುದು ಇವೇ ಮೊದಲಾದ ಕಾರಣಗಳಿಂದಾಗಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 192.40 ಅಂಕಗಳ ನಷ್ಟದೊಂದಿಗೆ 38,684.72 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 45.95 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 11,598 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
2019-20ರ ಸಾಲಿನ ಮೊದಲ ದ್ವೆ„ಮಾಸಿಕ ಹಣಕಾಸು ನೀತಿ ಪರಾಮರ್ಶೆಯಲ್ಲಿ ಆರ್ ಬಿ ಐ ಇಂದು ತನ್ನ ರಿಪೋ ದರವನ್ನು ಶೇ.0.25ರಷ್ಟು ಇಳಿಸಿ ಶೇ.6ಕ್ಕೆ ನಿಗದಿಸಿತು.
ಇಂದಿನ ವಹಿವಾಟಿನಲ್ಲಿ ಟಿಸಿಎಸ್ ಶೇರು ಶೇ.3.17ರ ಕುಸಿತವನ್ನು ಕಂಡು ಟಾಪ್ ಲೂಸರ್ ಎನಿಸಿಕೊಂಡಿತು.
ಇದನ್ನು ಅನುಸರಿಸಿ ಎಚ್ಸಿಎಲ್ ಟೆಕ್, ಎಸ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಆರ್ಐಎಲ್, ಐಸಿಐಸಿಐ ಬ್ಯಾಂಕ್, ಇನ್ಫೋಸಿಸ್, ಟಾಟಾ ಸ್ಟೀಲ್, ಕೋಟಕ್ ಬ್ಯಾಂಕ್ ಮತ್ತು ಎಲ್ ಆ್ಯಂಡ್ ಟಿ ಶೇರುಗಳು ಶೇ.2.34ರ ನಷ್ಟಕ್ಕೆ ಗುರಿಯಾದವು.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,699 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 1,072 ಶೇರುಗಳು ಮುನ್ನಡೆ ಸಾಧಿಸಿದವು; 1,453 ಶೇರುಗಳು ಹಿನ್ನಡೆಗೆ ಗುರಿಯಾದವು; 174 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ