ಐದು ದಿನಗಳ ನಿರಂತರ ಹಿನ್ನಡೆಗೆ ಬ್ರೇಕ್: ಸೆನ್ಸೆಕ್ಸ್ 35 ಅಂಕ ಏರಿಕೆ
Team Udayavani, May 22, 2018, 4:56 PM IST
ಮುಂಬಯಿ : ಕಳೆದ ಐದು ದಿನಗಳ ನಿರಂತರ ಸೋಲಿನ ನಡೆಗೆ ಕೊನೆಗೂ ಬ್ರೇಕ್ ಹಾಕುವಲ್ಲಿ ಸಫಲವಾದ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ವಹಿವಾಟಿನಲ್ಲಿ 35 ಅಂಕಗಳ ಏರಿಕೆಯನ್ನು ದಾಖಲಿಸಿ 34,651.24 ಅಂಕಗಳ ಮಟ್ಟವನ್ನು ತಲುಪಿತು.
ಅಮೆರಿಕ – ಚೀನ ವಾಣಿಜ್ಯ ಉದ್ವಿಗ್ನತೆ ಶಮನಗೊಂಡ ಹಿನ್ನೆಲೆಯಲ್ಲಿ ವಾಲ್ ಸ್ಟ್ರೀಟ್ ನಿನ್ನೆ ಉತ್ತಮ ಏರಿಕೆಯನ್ನು ದಾಖಲಿಸಿತ್ತು. ಅದನ್ನು ಅನುಸರಿಸಿ ಇಂದು ಏಶ್ಯನ್ ಶೇರುಪೇಟೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ತೋರಿ ಬಂದಿತ್ತು. ಹಾಗಿದ್ದರೂ ಮುಂಬಯಿ ಶೇರು ಪೇಟೆಯಲ್ಲಿ ತೇಜಿ ಕಂಡು ಬಂದಿತ್ತು. ಕಳೆದ ಐದು ದಿನಗಳ ವಹಿವಾಟಿನಲ್ಲಿ ಸೆನ್ಸೆಕ್ಸ್ 940.58 ಅಂಕಗಳ ನಷ್ಟವನ್ನು ಅನುಭವಿಸಿತ್ತು.
ರಾಷ್ಟ್ರೀಯ ಶೇರು ಪೇಟೆಯ ನಿಫ್ಟಿ ಸೂಚ್ಯಂಕ ಇಂದು 20 ಅಂಕಗಳ ಏರಿಕೆಯನ್ನು ದಾಖಲಿಸಿ ದಿನದ ವಹಿವಾಟನ್ನು 10.536.70 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಮುಂಬಯಿ ಶೇರು ಮಾರುಕಟ್ಟೆಯಲ್ಲಿಂದು ಒಟ್ಟು 2,765 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,450 ಶೇರುಗಳು ಮುನ್ನಡೆ ಸಾಧಿಸಿದವು; 1,177 ಶೇರುಗಳು ಹಿನ್ನಡೆಗೆ ಗುರಿಯಾದವು; 138 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ