ಮತ್ತೆ ಹೊಸ ದಾಖಲೆ, Sensex 200 ಅಂಕ ಜಂಪ್, 11,400 ದಾಟಿದ Nifty
Team Udayavani, Aug 6, 2018, 10:40 AM IST
ಮುಂಬಯಿ : ಏಶ್ಯನ್ ಶೇರು ಮಾರುಕಟ್ಟೆಗಳಲ್ಲಿ ಸ್ಥಿರತೆಯ ಪ್ರವೃತ್ತಿ ತೋರಿಬಂದಿರುವುದನ್ನು ಅನುಸರಿಸಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ, ಕಳೆದ ಶುಕ್ರವಾರದ ರಾಲಿಯನ್ನು ಇಂದು ಸೋಮವಾರವೂ ಮುಂದುವರಿಸಿ, ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗಿತದೊಂದಿಗೆ 37,790.72 ಅಂಕಗಳ ಮಟ್ಟಕ್ಕೇರುವ ಮೂಲಕ ಹೊಸ ದಾಖಲೆಯ ಎತ್ತರವನ್ನು ತಲುಪಿದ ಸಾಧನೆ ಮಾಡಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 11,400 ಅಂಕಗಳನ್ನು ದಾಟಿ ಮುನ್ನುಗ್ಗಿರುವುದು ಗಮನಾರ್ಹವೆನಿಸಿತು.
ಗ್ರಾಹಕ ಉತ್ಪನ್ನಗಳ ಕಂಪೆನಿ, ಪಿಎಸ್ಯು, ಬ್ಯಾಂಕಿಂಗ್ ಮೊದಲಾದ ರಂಗಗಳ ಶೇರುಗಳು ಇಂದು ಭರ್ಜರಿ ಖರೀದಿಯನ್ನು ಕಂಡ ಪ್ರಯುಕ್ತ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಬೆಳಗ್ಗೆ 10.30ರ ಹೊತ್ತಿಗೆ 136.55 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 37,692.71 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 30.90 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 11,391.70 ಅಂಕಗಳ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಎಕ್ಸಿಸ್ ಬ್ಯಾಂಕ್, ಎಸ್ಬಿಐ, ಐಸಿಐಸಿಐ ಬ್ಯಾಂಕ್, ಎಚ್ ಡಿ ಎಫ್ ಸಿ, ಇನ್ಫೋಸಿಸ್ ಶೇರುಗಳು ಇಂದು ಅತೀ ಹೆಚ್ಚು ಕ್ರಿಯಾಶೀಲವಾಗಿದ್ದವು. ಟಾಪ್ ಗೇನರ್ಗಳು : ಐಸಿಐಸಿಐ ಬ್ಯಾಂಕ್, ಯುಪಿಎಲ್, ಎಸ್ಬಿಐ, ಟೆಕ್ ಮಹೀಂದ್ರ, ಟಾಟಾ ಸ್ಟೀಲ್; ಟಾಪ್ ಲೂಸರ್ಗಳು : ಎಚ್ಯುಎಲ್, ಸನ್ ಫಾರ್ಮಾ, ಲೂಪಿನ್, ಡಾ. ರೆಡ್ಡೀಸ್ ಲ್ಯಾಬ್, ಕೋಟಕ್ ಮಹಿಂದ್ರ.
ಡಾಲರ್ ಎದುರಿನ ತನ್ನ ಏರು ಗತಿಯನ್ನು ನಿರಂತರ ಎರಡನೇ ದಿನಕ್ಕೆ ವಿಸ್ತರಿಸಿರುವ ರೂಪಾಯಿ ಇಂದು 6 ಪೈಸೆಯ ಸುಧಾರಣೆಯನ್ನು ದಾಖಲಿಸಿ ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 68.54 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ