ಮುಂಚೂಣಿ ಶೇರುಗಳ ಭರಾಟೆಯ ಖರೀದಿ: ಸೆನ್ಸೆಕ್ಸ್‌ 200ಕ್ಕೂ ಅಧಿಕ ಅಂಕ ಜಂಪ್‌

Team Udayavani, May 17, 2019, 10:42 AM IST

ಮುಂಬಯಿ : ಐಟಿ, ಮೆಟಲ್‌ ಸೇರಿದಂತೆ ಮುಂಚೂಣಿ ಕ್ಷೇತ್ರಗಳ ಶೇರುಗಳು ಉತ್ತಮ ಖರೀದಿಯಾ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಅಧಿಕ ಅಂಕಗಳ ಜಿಗಿತವನ್ನು ದಾಖಲಿಸಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 11,300 ಅಂಕಗಳ ಗಡಿಯನ್ನು ಪುನರ್‌ ಸಂಪಾದಿಸಿತು.

ನಿನ್ನೆ ಗುರುವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್‌ 279 ಅಂಕಗಳ ಜಿಗಿತವನ್ನು ಸಾಧಿಸಿತ್ತಾದರೆ ನಿಫ್ಟಿ 100ಕ್ಕೂ ಅಧಿಕ ಅಂಕಗಳ ಮುನ್ನಡೆಯನ್ನು ದಾಖಲಿಸಿತ್ತು.

ಬೆಳಗ್ಗೆ 10.40 ರ ಸುಮಾರಿಗೆ ಸೆನ್ಸೆಕ್ಸ್‌ 193.89 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 37,588.45 ಅಂಕಗಳ ಮಟ್ಟದಲ್ಲೂ ನಿಫ್ಟಿ 51.20 ಅಂಕಗಳ ಮುನ್ನಡೆಯೊಂದಿಗೆ 11,308.30 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.

ಇಂದು ಬೆಳಗ್ಗೆಯ ವಹಿವಾಟಿನ ಟಾಪ್‌ ಗೇನರ್‌ಗಳಾಗಿ ಮೂಡಿ ಬಂದ ಎಸ್‌ ಬ್ಯಾಂಕ್‌, ಬಜಾಜ್‌ ಫಿನಾನ್ಸ್‌, ಕೋಲ್‌ ಇಂಡಿಯಾ, ಎಚ್‌ ಡಿ ಎಫ್ ಸಿ, ಮಹೀಂದ್ರ, ಇಂಡಸ್‌ ಇಂಡ್‌ ಬ್ಯಾಂಕ್‌, ಎಚ್‌ ಯು ಎಲ್‌, ಟಿಸಿಎಸ್‌ ಮತ್ತು ಮಾರುತಿ ಸುಜುಕಿ ಶೇರುಗಳು ಶೇ.0.91ರ ಏರಿಕೆಯನ್ನು ದಾಖಲಿಸಿದವು.

ಡಾಲರ್‌ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 16 ಪೈಸೆಗಳ ಕುಸಿತವನ್ನು ಕಂಡು 70.20 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು. ಬ್ರೆಂಟ್‌ ಕಚ್ಚಾ ತೈಲ ಧಾರಣೆ ಇಂದು ಶೇ.0.30 ಏರಿಕೆಯನ್ನು ಕಂಡು ಬ್ಯಾರಲ್‌ ಗೆ 72.84 ಡಾಲರ್‌ ಮಟ್ಟದಲ್ಲಿ ಬಿಕರಿಯಾಗುತ್ತಿತ್ತು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಂಗಳೂರು: ಕುಲಶೇಖರದಿಂದ ಮೂಡುಬಿದಿರೆ- ಕಾರ್ಕಳ ನಡುವಿನ ಸುಮಾರು 60 ಕಿ.ಮೀ. ದೂರದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಮತ್ತೂಮ್ಮೆ ಭೂಸ್ವಾಧೀನ ಪ್ರಕ್ರಿಯೆ...

  • ಕನ್ನಡ ದೃಶ್ಯ ಜಗತ್ತನ್ನು ಕಲಾತ್ಮಕವಾಗಿ ಶ್ರೀಮಂತಗೊಳಿಸಿದ ಕೆಲವೇ ಕೆಲವು ನಿರ್ದೇಶಕರ ಪೈಕಿ ಗಿರೀಶ್‌ ಕಾಸರವಳ್ಳಿ ಕೂಡ ಒಬ್ಬರು. ಚೊಚ್ಚಲ ನಿರ್ದೇಶನ, "ಘಟಶ್ರಾದ್ಧ'...

  • ಬೆಂಗಳೂರು: ರಾಜ್ಯಾದ್ಯಂತ ಅನುಷ್ಠಾನದಲ್ಲಿರುವ ಶುದ್ಧ ಕುಡಿಯುವ ನೀರು ಘಟಕಗಳ ಕಾರ್ಯನಿರ್ವಹಣೆ ಸಂಬಂಧ ಸೂಕ್ತ ನಿಯಮಾವಳಿ ರೂಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ....

  • ರಘುರಾಮನು ವನರಾಮನಾಗಿ ಆರಾಮದಿಂದ ಇದ್ದ ಸ್ಥಳವೇ ಚಿತ್ರಕೂಟ. ರಾಮ, ಲಕ್ಷ¾ಣ, ಸೀತೆಯರ ಚಿತ್ತಾಪಹಾರ ಮಾಡಿದ್ದ ಚಿತ್ರಕೂಟವು ಪ್ರವಾಸಿಗರ ಚಿತ್ತವನ್ನೂ ಅಪಹರಿಸುವಷ್ಟು...

  • ಮಂಗಳೂರು: ಪಾಶ್ಚಾತ್ಯ ಪ್ರಭಾವದಿಂದಾಗಿ ಭಾರತೀಯ ಸಂಗೀತವು ಸ್ವಲ್ಪ ಮಂಕಾಗಿ ಕಂಡರೂ ಮತ್ತೆ ಚಿಗುರುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|...