ಎನ್ಡಿಎ ಬೃಹತ್ ಲೀಡ್: ಮುಂಬಯಿ ಶೇರು 900ಕ್ಕೂ ಅಧಿಕ ಅಂಕ ಜಂಪ್
Team Udayavani, May 23, 2019, 10:40 AM IST
ಮುಂಬಯಿ : 2019ರ ಲೋಕಸಭಾ ಚುನಾವಣೆಯ ಮತ ಎಣಿಕೆ ಇಂದು ಗುರುವಾರ ನಡೆಯುತ್ತಿದ್ದು ಬಿಜೆಪಿ ನೇತೃತ್ವದ ಎನ್ಡಿಎ 335 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಬೆಳಗ್ಗಿನ ಆರಂಭಿಕ ವಹಿವಾಟಿನಲ್ಲಿ 900ಕ್ಕೂ ಅಧಿಕ ಅಂಕಗಳ ಜಿಗಿತವನ್ನು ಸಾಧಿಸಿದೆ.
ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಶೇ.2ರ ಏರಿಕೆಯನ್ನು ದಾಖಲಿಸಿ 11,969 ಅಂಕಗಳ ಮಟ್ಟಕ್ಕೆ ಜಿಗಿಯಿತು.
ನಿನ್ನೆ ಬುಧವಾರದ ವಹಿವಾಟನ್ನು ಸೆನ್ಸೆಕ್ 140.41 ಅಂಕಗಳ ಏರಿಕೆಯೊಂದಿಗೂ ನಿಫ್ಟಿ 28.80 ಅಂಕಗಳ ಏರಿಕೆಯೊಂದಿಗೆ 11,737.90 ಅಂಕಗಳ ಮಟ್ಟದಲ್ಲೂ ಕೊನೆಗೊಳಿಸಿದ್ದವು.
ಡಾಲರ್ ಎದುರು ರೂಪಾಯಿ ಇಂದು 26 ಪೈಸೆಗಳ ಏರಿಕೆಯನ್ನು ದಾಖಲಿಸಿ 69.40 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಇಂದು ಬೆಳಗ್ಗೆ 10.30ರ ಸುಮಾರಿಗೆ ಸೆನ್ಸೆಕ್ಸ್ 835.94 ಅಂಕಗಳ ಏರಿಕೆಯನ್ನು ಕಾಯ್ದುಕೊಂಡು 39,946.15 ಅಂಕಗಳ ಮಟ್ಟದಲ್ಲೂ ನಿಫ್ಟಿ 244.10 ಅಂಕಗಳ ಮುನ್ನಡೆಯೊಂದಿಗೆ 11,982.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಟಾಪ್ ಗೇನರ್ ಗಳಾಗಿ ಮೂಡಿ ಬಂದ ಇಂಡಸ್ ಇಂಡ್ ಬ್ಯಾಂಕ್, ಎಸ್ಬಿಐ, ಎಲ್ ಆ್ಯಂಡ್ ಟಿ, ಪವರ್ ಗ್ರಡ್, ಎಸ್ ಬ್ಯಾಂಕ್, ಕೋಟಕ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಆರ್ಐಎಲ್, ಎಚ್ ಡಿ ಎಫ್ ಸಿ, ಭಾರ್ತಿ ಏರ್ಟೆಲ್ ಮತ್ತು ಎಕ್ಸಿಸ್ ಬ್ಯಾಂಕ್ ಶೇ.7ರ ಏರಿಕೆಯನ್ನು ದಾಖಲಿಸಿದವು.
ಏಶ್ಯದ ಇತರ ಶೇರು ಮಾರುಕಟ್ಟೆಗಳಾಗಿರುವ ಚೀನ, ಜಪಾನ್ ಮತ್ತು ಕೊರಿಯ ಇಂದು ಹಿನ್ನಡೆ ಕಂಡಿವೆ. ಬ್ರೆಂಟ್ ಕಚ್ಚಾ ತೈಲ ಶೇ.0.58ರ ಇಳಿಕೆಯನ್ನು ಕಂಡು ಬ್ಯಾರಲ್ ಗೆ 70.58 ಡಾಲರ್ ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್