ಮತ್ತೆ 39,000 ಮಟ್ಟ ಕಂಡು ಹಿಂದೆ ಸರಿದ ಮುಂಬಯಿ ಶೇರು: 57 ಅಂಕ ಏರಿಕೆ
Team Udayavani, Apr 2, 2019, 10:42 AM IST
ಮುಂಬಯಿ : ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ 57.61 ಅಂಕಗಳ ಏರಿಕೆಯನ್ನು ದಾಖಲಿಸಿ 38,929.48 ಅಂಕಗಳ ಮಟ್ಟಕ್ಕೆ ಏರಿತು.
ಸೆನ್ಸೆಕ್ಸ್ ಇಂದು 39,000 ಅಂಕಗಳ ಗಡಿ ದಾಟಿ ಬಳಿಕ ಅಲ್ಲಿಂದ ಹಿಂದೆ ಸರಿಯಿತು. ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತೋರಿ ಬಂದಿರುವ ಧನಾತ್ಮಕತೆ, ವಿದೇಶಿ ಬಂಡವಾಳದ ನಿರಂತರ ಒಳ ಹರಿವು ಇವೇ ಮೊದಲಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯಲ್ಲಿ ಈಚಿನ ದಿನಗಳಲ್ಲಿ ತೇಜಿ ಕಂಡು ಬರುತ್ತಿದೆ.
ಹಾಗಿದ್ದರೂ ಬೆಳಗ್ಗೆ 10.40ರ ಸುಮಾರಿಗೆ ಸೆನ್ಸೆಕ್ಸ್ 6.23 ಅಂಕಗಳ ನಷ್ಟದೊಂದಿಗೆ 38,865.64 ಅಂಕಗಳ ಮಟ್ಟದಲ್ಲೂ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 5.20 ಅಂಕಗಳ ನಷ್ಟದೊಂದಿಗೆ 11,664.00 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಟಾ ಮೋಟರ್, ಎಸ್ಬಿಐ, ಈಶರ್ ಮೋಟರ್, ರಿಲಯನ್ಸ್, ಮಾರುತಿ ಸುಜುಕಿ ಶೇರುಗಳು ಇಂದಿನ ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ಡಾಲರ್ ಎದುರು ರೂಪಾಯಿ ಇಂದಿನ ಆರಂಭಿಕ ವಹಿವಾಟಿನಲ್ಲಿ 22 ಪೈಸೆಗಳ ಕುಸಿತವನ್ನು ಕಂಡು 69.36 ರೂ. ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್