ಭಾರತ-ಅಮೆರಿಕ ವಾಣಿಜ್ಯ ಸಮರ ಭೀತಿ: ಸೆನ್ಸೆಕ್ಸ್‌ 491, ನಿಫ್ಟಿ 151 ಅಂಕ ಕುಸಿತ

Team Udayavani, Jun 17, 2019, 5:31 PM IST

ಮುಂಬಯಿ : ಭಾರತದ ಪ್ರತೀಕಾರದ ಕ್ರಮದ ಫ‌ಲವಾಗಿ ಅಮೆರಿಕದೊಂದಿಗಿನ ವಾಣಿಜ್ಯ ಸಮರ ಬಿಗಡಾಯಿಸಬಹುದೆಂಬ ಭೀತಿಯಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಸೋಮವಾರದ ವಹಿವಾಟಿನಲ್ಲಿ 491.28 ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಗಿ ದಿನಾಂತ್ಯ 38,960.70 ಅಂಕಗಳ ಮಟ್ಟಕ್ಕೆ ಕುಸಿಯಿತು.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 151.15 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 11,672.15 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ನಿರಂತರ ನಾಲ್ಕನೇ ದಿನವೂ ನಷ್ಟದ ಹಾದಿಯಲ್ಲಿ ಸಾಗಿದ ಮುಂಬಯಿ ಶೇರು ಮಾರುಕಟ್ಟೆಯಲ್ಲಿ ಬಿಎಸ್‌ಇ ಮೆಟಲ್‌ ಶೇ.2ರ ನಷ್ಟಕ್ಕೆ ಗುರಿಯಾಯಿತು.

ಟಾಟಾ ಸ್ಟೀಲ್‌ ಶೇರು ಶೇ.5ರ ಕುಸಿತವನ್ನು ಕಂಡಿತು. ಉಳಿದಂತೆ ವೇದಾಂತ, ಟಾಟಾ ಮೋಟರ್‌, ಎಕ್ಸಿಸ್‌ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ರಿಲಯನ್ಸ, ಒಎನ್‌ಜಿಸಿ, ಸನ್‌ ಫಾರ್ಮಾ, ಮಾರುತಿ ಮತ್ತು ಎಲ್‌ ಆ್ಯಂಡ್‌ ಟಿ ಶೇರುಗಳು ಶೇ.3.33ರಷ್ಟು ಕುಸಿದವು.

ಭಾರತದ ಉಕ್ಕು ಮತ್ತು ಅಲ್ಯುಮಿನಿಯಂ ಮೇಲೆ ಅಮೆರಿಕ ಅತ್ಯಧಿಕ ಸುಂಕ ಏರಿಸಿದ್ದಕ್ಕೆ ಪ್ರತೀಕಾರದ ಕ್ರಮವಾಗಿ ಭಾರತ, ಅಮೆರಿಕದ 28 ಉತ್ಪನ್ನಗಳ ಮೇಲೆ ಸುಂಕ ಏರಿಸಿರುವುದು ಉಭಯ ದೇಶಗಳ ನಡುವಿನ ವಾಣಿಜ್ಯ ಸಮರ ತೀವ್ರಗೊಳ್ಳುವುದಕ್ಕೆ ಕಾರಣವಾದೀತು ಎಂದು ತಿಳಿಯಲಾಗಿದೆ.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,695 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 685 ಶೇರುಗಳು ಮುನ್ನಡೆ ಸಾಧಿಸಿದವು; 1,879 ಶೇರುಗಳು ಹಿನ್ನಡೆಗೆ ಗುರಿಯಾದವು; 131 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ