ಮುಂಬಯಿ ಶೇರು ಪೇಟೆ ನಿರಂತರ 2ನೇ ದಿನ ಕುಸಿತ : 355 ಅಂಕ ನಷ್ಟ
Team Udayavani, Mar 25, 2019, 4:13 PM IST
ಮುಂಬಯಿ : ಜಾಗತಿಕ ಶೇರು ಪೇಟೆಗಳಲ್ಲಿ ಭರಾಟೆಯ ಶೇರು ಮಾರಾಟ ಕಂಡು ಬಂದಿದ್ದು ಇದು ಜಾಗತಿಕ ಆರ್ಥಿಕ ಹಿನ್ನಡೆಯ ಸೂಚನೆ ಇದ್ದಿರಬಹುದೆಂಬ ಭಯದಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ ಇಂದು ಸೋಮವಾರದ ವಹಿವಾಟನ್ನು 355.70 ಅಂಕಗಳ ನಷ್ಟದೊಂದಿಗೆ 37,808.91 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 102.65 ಅಂಕಗಳ ನಷ್ಟದೊಂದಿಗೆ ದಿನದ ವಹಿವಾಟನ್ನು 11,354.25 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಕಳೆದೆರಡು ದಿನಗಳಲ್ಲಿ ಸೆನ್ಸೆಕ್ಸ್ 575 ಅಂಕಗಳನ್ನು ಕಳೆದುಕೊಂಡಿದೆ. ಇಂದು ಹೆಚ್ಚಿನೆಲ್ಲ ಏಶ್ಯನ್ ಶೇರು ಪೇಟೆಗಳಲ್ಲಿ ಹಿನ್ನಡೆ ತೋರಿ ಬಂದಿದ್ದು ಐರೋಪ್ಯ ಶೇರು ಮಾರುಕಟ್ಟೆಗಳು ಕೂಡ ಇಂದಿನ ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿವೆ.
ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,869 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; ಈ ಪೈಕಿ 792 ಶೇರುಗಳು ಮುನ್ನಡೆ ಸಾಧಿಸಿದವು; 1,884 ಶೇರುಗಳು ಹಿನ್ನಡೆಗೆ ಗುರಿಯಾದವು; 193 ಶೇರುಗಳ ಧಾರಣೆ ಯಾವುದೇ ಬದಲಾವಣೆ ಕಾಣಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ