ದಶಕದ ನಂತರ ಒಂದೇ ದಿನದಲ್ಲಿ ಗಗನಕ್ಕೆ ಚಿಮ್ಮಿದ ಚಿನಿವಾರ ಪೇಟೆ ಶೇರು ಸೂಚ್ಯಂಕ
Team Udayavani, Sep 20, 2019, 5:09 PM IST
ಮುಂಬೈ:ಕಳೆದ ಎರಡು ಮೂರು ದಿನಗಳಿಂದ ಭಾರೀ ಕುಸಿತ ಕಾಣುತ್ತಿದ್ದ ಮುಂಬೈ ಶೇರುಪೇಟೆ ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೇಶೀಯ ಕಾರ್ಪೋರೇಟ್ ಕಂಪನಿಗಳ ತೆರಿಗೆಯನ್ನು ಇಳಿಕೆ ಮಾಡಿರುವುದಾಗಿ ಘೋಷಿಸಿದ್ದರಿಂದ ಚಿನಿವಾರ ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ ಬರೋಬ್ಬರಿ 1900 ಅಂಕಗಳ ಭಾರೀ ಏರಿಕೆಯೊಂದಿಗೆ 37,990.47 ಅಂಕಗಳ ವಹಿವಾಟು ನಡೆಸಿದೆ.
ಅದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ (ಎನ್ ಎಸ್ ಇ) 551.35 ಅಂಕಗಳ ಏರಿಕೆಯೊಂದಿಗೆ 11,256.15 ಅಂಕಗಳ ವಹಿವಾಟು ಕಂಡಿದೆ. ಸೆನ್ಸೆಕ್ಸ್ ಸೂಚ್ಯಂಕ ಭಾರೀ ಏರಿಕೆಯಿಂದ ದೇಶೀಯ ಹೂಡಿಕೆದಾರರಿಗೆ 2.11ಲಕ್ಷ ಕೋಟಿ ರೂಪಾಯಿಯಷ್ಟು ಏರಿಕೆಯಾದಂತಾಗಿದೆ.
ಆರ್ಥಿಕಾಭಿವೃದ್ಧಿಯ ಹಿನ್ನೆಲೆಯಲ್ಲಿ ಜಿಎಸ್ ಟಿ ಮಂಡಳಿ ಸಭೆ ಬಳಿಕ ಮಾತನಾಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ದೇಶೀಯ ಕಾರ್ಪೋರೇಟ್ ಸಂಸ್ಥೆಗಳ ತೆರಿಗೆಯನ್ನು ಶೇ.22ಕ್ಕೆ ಇಳಿಸಲಾಗಿದ್ದು, ನೂತನ ಕಾರ್ಪೋರೇಟ್ ಸಂಸ್ಥೆಗಳಿಗೆ ಶೇ.15ರಷ್ಟು ತೆರಿಗೆ ವಿಧಿಸಲಾಗುವುದು ಎಂದು ಘೋಷಿಸಿದ್ದರು.
ಈ ಘೋಷಣೆಯ ಬೆನ್ನಲ್ಲೇ ದೇಶೀಯ ಶೇರುಮಾರುಕಟ್ಟೆ ವಹಿವಾಟು ಭರ್ಜರಿಯಾಗಿ ನಡೆಯುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಇದರಿಂದಾಗಿ ಮಾರುಕಟ್ಟೆ ಶೇರುವಾಹಿಟಿಗೆ ಭರ್ಜರಿ ಬಲ ನೀಡಿದಂತಾಗಿದೆ ಎಂದು ಆರ್ಥಿಕ ವಲಯ ವಿಶ್ಲೇಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ