ಆರ್ಥಿಕ ಹಿಂಜರಿಕೆ ಭಯ ಬೇಡ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,041 ಅಂಕ ಜಿಗಿತ, ನಿಫ್ಟಿ ಏರಿಕೆ
ಎಸ್ ಇ ನಿಫ್ಟಿ 287.80 ಅಂಕಗಳಷ್ಟು ಏರಿಕೆಯಾಗಿದ್ದು, 16,929.60 ಅಂಕಗಳಲ್ಲಿ ವಹಿವಾಟು ಮುಕ್ತಾಯ
Team Udayavani, Jul 28, 2022, 5:30 PM IST
ಮುಂಬಯಿ: ಅಮೆರಿಕದ ಫೆಡರಲ್ ರಿಸರ್ವ್ ಶೇ.75 ಬೇಸಿಸ್ ಪಾಯಿಂಟ್ಸ್ ಗಳಷ್ಟು ಬಡ್ಡಿದರ ಏರಿಕೆ ಹಾಗೂ ಸದ್ಯ ಆರ್ಥಿಕ ಹಿಂಜರಿಕೆ ಭಯ ಇಲ್ಲ ಎಂಬ ಹೇಳಿಕೆಯಿಂದಾಗಿ ಜಾಗತಿಕ ಷೇರುಮಾರುಕಟ್ಟೆಯ ಭರ್ಜರಿ ವಹಿವಾಟಿನ ಪರಿಣಾಮ ಗುರುವಾರ(ಜುಲೈ 28) ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಒಂದು ಸಾವಿರಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಇದನ್ನೂ ಓದಿ:ಹತ್ಯೆಯಲ್ಲಿ ಕೇರಳದವರು ಭಾಗಿಯಾಗಿರುವ ಸಂಶಯ: ಪ್ರವೀಣ್ ನಿವಾಸದತ್ತ ಸಿಎಂ
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 1,041.47 ಅಂಕಗಳಷ್ಟು ಏರಿಕೆಯೊಂದಿಗೆ 56,857.79 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 287.80 ಅಂಕಗಳಷ್ಟು ಏರಿಕೆಯಾಗಿದ್ದು, 16,929.60 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿದೆ.
ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ ಹೂಡಿಕೆದಾರರಿಗೆ ಭರ್ಜರಿ ಲಾಭವಾಗಿದ್ದು, ಬಾಂಬೆ ಷೇರು ಮಾರುಕಟ್ಟೆಯ ವಹಿವಾಟು 259.71 ಲಕ್ಷ ಕೋಟಿಯಿಂದ 262.53 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ಮಾರುಕಟ್ಟೆ ವರದಿ ತಿಳಿಸಿದೆ.
ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಟಾಟಾ ಸ್ಟೀಲ್, ಕೋಟಕ್ ಬ್ಯಾಂಕ್ ಮತ್ತು ಇಂಡಸ್ ಇಂಡ್ ಬ್ಯಾಂಕ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಭಾರ್ತಿ ಏರ್ ಟೆಲ್, ಆಲ್ಟ್ರಾಟೆಕ್ ಸಿಮೆಂಟ್, ಡಾ.ರೆಡ್ಡೀಸ್ ಲ್ಯಾಬೋರೇಟರೀಸ್, ಐಟಿಸಿ ಮತ್ತು ಸನ್ ಫಾರ್ಮಾ ಷೇರುಗಳು ನಷ್ಟ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್