ವಿದೇಶಿ ಬಂಡವಾಳದ ಒಳಹರಿವು:ಮುಂಬೈ ಶೇರುಪೇಟೆ ಸೆನ್ಸೆಕ್ಸ್ ಏರಿಕೆ, ನಿಫ್ಟಿ ಸಾರ್ವಕಾಲಿಕ ದಾಖಲೆ
ಶೇರು ಪೇಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕ 370.53 ಅಂಕಗಳ ಏರಿಕೆ
Team Udayavani, Nov 24, 2020, 11:05 AM IST
ಮುಂಬೈ: ಜಾಗತಿಕ ಮಾರುಕಟ್ಟೆಯಲ್ಲಿನ ಚೇತರಿಕೆ ಹಾಗೂ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ(ನವೆಂಬರ್ 24, 2020) ಮುಂಬೈ ಶೇರುಪೇಟೆಯ ಆರಂಭಿಕ ವಹಿವಾಟು ಭರ್ಜರಿಯಾಗಿ ಆರಂಭಗೊಂಡಿದ್ದು, ಎನ್ ಎಸ್ ಇ ನಿಫ್ಟಿ ಇದೇ ಮೊದಲ ಬಾರಿಗೆ 13,000ಅಂಕಗಳಿಗೆ ತಲುಪಿದೆ.
ಮಂಗಳವಾರ ಮುಂಬೈ ಶೇರು ಪೇಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕ 370.53 ಅಂಕಗಳ ಏರಿಕೆಯೊಂದಿಗೆ ಪ್ರಸ್ತುತ 44,447.67 ಅಂಕಗಳ ವಹಿವಾಟು ನಡೆದಿದೆ.
ಇದೇ ಮೊದಲ ಬಾರಿಗೆ ದಾಖಲೆ ಎಂಬಂತೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 106.20 ಅಂಕಗಳ ಏರಿಕೆಯೊಂದಿಗೆ 13,032.65 ಅಂಕಗಳಿಗೆ ತಲುಪಿದೆ.
ಸೋಮವಾರ(ನವೆಂಬರ್ 23, 2020) ಮುಂಬೈ ಶೇರು ಮಾರುಕಟ್ಟೆ ವಹಿವಾಟು 194.90 ಅಂಕಗಳ ಏರಿಕೆಯೊಂದಿಗೆ 44,077.15 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಂಡಿತ್ತು. ರಾಷ್ಟ್ರೀಯ ಶೇರು ಮಾರುಕಟ್ಟೆ ನಿಫ್ಟಿ ಸೂಚ್ಯಂಕ 67.40 ಅಂಕಗಳೊಂದಿಗೆ 12,926.45 ಅಂಕಗಳೊಂದಿಗೆ ವಹಿವಾಟು ಮುಕ್ತಾವಾಗಿತ್ತು.
ಮುಂಬೈ ಶೇರುಮಾರುಕಟ್ಟೆ ಸೆನ್ಸೆಕ್ಸ್ ಸೂಚ್ಯಂಕ ಏರಿಕೆಯಿಂದ ಎಂ ಆ್ಯಂಡ್ ಎಂ, ಮಾರುತಿ, ಕೋಟಕ್ ಬ್ಯಾಂಕ್, ಟೆಕ್ ಮಹೀಂದ್ರ, ಎಚ್ ಡಿಎಫ್ ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್, ಎಚ್ ಸಿಎಲ್ ಟೆಕ್, ಏಶಿಯನ್ ಪೇಯಿಂಟ್, ಐಟಿಸಿ, ಎಸ್ ಬಿಐ ಮತ್ತು ಎನ್ ಟಿಪಿಸಿ ಶೇರುಗಳು ಶೇ.3.23ರಷ್ಟು ಏರಿಕೆಯಾಗಿರುವುದಾಗಿ ವರದಿ ತಿಳಿಸಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂಧನ, ಅನಿಲ ಷೇರುಗಳಿಗೆ ನಷ್ಟ; ಸೆನ್ಸೆಕ್ಸ್ 210 ಅಂಕ ಕುಸಿತ, ನಿಫ್ಟಿ 62 ಅಂಕ ಇಳಿಕೆ
ಎಲ್ಲೆಲ್ಲಿ ಎಷ್ಟು ಹೆಚ್ಚಳ? ಬೆಂಗಳೂರು, ಮುಂಬೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗರಿಷ್ಠ ಏರಿಕೆ
ಲಾಕ್ಡೌನ್ ವೇಳೆ ಅಂಬಾನಿ ಆದಾಯ ಗಂಟೆಗೆ 90 ಕೋಟಿ!
ಸೆನ್ಸೆಕ್ಸ್ 531 ಅಂಕ ಕುಸಿತ, ನಿಫ್ಟಿ 133 ಅಂಕ ಇಳಿಕೆ ; IT ಕ್ಷೇತ್ರದ ಷೇರುಗಳಿಗೆ ನಷ್ಟ
ಕೇಂದ್ರ ಬಜೆಟಲ್ಲಿ ದೇಶಿ ಆಟಿಕೆಗಳಿಗೆ ಉತ್ತೇಜನ ಕ್ರಮ ಘೋಷಣೆ ನಿರೀಕ್ಷೆ
MUST WATCH
ಹೊಸ ಸೇರ್ಪಡೆ
ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ
ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್ಗಳ ದೇಣಿಗೆ
ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ
ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ
ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!