ಮುಂಬೈ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ 100 ಅಂಕ ಕುಸಿತ, ನಿಫ್ಟಿ 14,450
ಸೋಮವಾರ(ಜ.11) ಮುಂಬೈ ಷೇರುಪೇಟೆ 49 ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿತ್ತು.
Team Udayavani, Jan 12, 2021, 11:25 AM IST
ಮುಂಬಯಿ:ಮುಂಬೈ ಷೇರುಪೇಟೆ ಮಂಗಳವಾರ(ಜನವರಿ12, 2021)ದ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕ (ಬಿಎಸ್ ಇ) ನೂರು ಅಂಕಗಳಷ್ಟು ಕುಸಿತ ಕಂಡಿದ್ದು, ಎಚ್ ಡಿಎಫ್ ಸಿ, ಕೋಟಕ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿವೆ.
ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 117.77 ಅಂಕಗಳಷ್ಟು ಕುಸಿತ ಕಂಡಿದ್ದು, 49,151.55 ಅಂಕಗಳಲ್ಲಿ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 20.95 ಅಂಕಗಳಷ್ಟು ಕುಸಿತ ಕಂಡಿದ್ದು, 14,463.80 ಅಂಕಗಳಲ್ಲಿ ವಹಿವಾಟು ನಡೆದಿದೆ.
ಇಂಡಸ್ ಲ್ಯಾಂಡ್ ಬ್ಯಾಂಕ್ ಷೇರು ಶೇ.2ರಷ್ಟು, ಕೋಟಕ್ ಬ್ಯಾಂಕ್, ಟೈಟಾನ್, ಏಷ್ಯನ್ ಪೇಯಿಂಟ್ಸ್, ಬಜಾಜ್ ಆಟೋ, ಟೆಕ್ ಮಹೀಂದ್ರಾ ಮತ್ತು ಎಚ್ ಡಿಎಫ್ ಸಿ ಷೇರುಗಳು ನಷ್ಟ ಕಂಡಿವೆ.
ಸೋಮವಾರ(ಜ.11) ಮುಂಬೈ ಷೇರುಪೇಟೆ 49 ಸಾವಿರದ ಗಡಿ ದಾಟುವ ಮೂಲಕ ದಾಖಲೆ ಬರೆದಿತ್ತು. ಬೆಳಗ್ಗಿನ ವಹಿವಾಟಿನ ವೇಳೆ ಮಧ್ಯಾಂತರದ ಒಂದು ಹಂತದಲ್ಲಿ 49,303.79ಕ್ಕೆ ತಲುಪಿದ್ದ ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ, ದಿನಾಂತ್ಯಕ್ಕೆ 49,269.32ರಲ್ಲಿ ವಹಿವಾಟು ಅಂತ್ಯಗೊಳಿಸಿ. ಬಿಎಸ್ಇ ಸೆನ್ಸೆಕ್ಸ್ 486.81 ಅಂಕಗಳ ಏರಿಕೆ ಕಂಡಿತ್ತು. ನಿಫ್ಟಿ ಕೂಡ 137.50 ಅಂಕಗಳಷ್ಟು ಏರಿಕೆಯಾಗಿ, 14,484.75ರಲ್ಲಿ ಕೊನೆಗೊಳ್ಳುವ ಮೂಲಕ ಸಾರ್ವಕಾಲಿಕ ದಾಖಲೆ ಬರೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ