6 ದಿನಗಳ ನಿರಂತರ ಸೋಲಿನ ಬಳಿಕ ಸೆನ್ಸೆಕ್ಸ್‌ 224 ಅಂಕ ಜಿಗಿತ

Team Udayavani, Sep 6, 2018, 4:35 PM IST

ಮುಂಬಯಿ : ಡಾಲರ್‌ ಎದುರು ರೂಪಾಯಿ ಕುಸಿತ ಇದೇ ಮೊದಲ ಬಾರಿಗೆ 72 ರೂ.ಗಳ ಕಳವಳಕಾರಿ ಮಟ್ಟವನ್ನು ದಾಟಿದ ಹೊರತಾಗಿಯೂ ಮುಂಬಯಿ ಶೇರು ಪೇಟೆ 224.50 ಅಂಕಗಳ ಜಿಗಿತವನ್ನು ಸಾಧಿಸಿ ಇಂದು ಗುರುವಾರದ ವಹಿವಾಟನ್ನು 38,242.81 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.

ನಿರಂತರ ಆರು ದಿನಗಳ ಸೋಲಿನ ಬಳಿಕ ಇಂದು ಮತ್ತೆ ಸೆನ್ಸೆಕ್ಸ್‌ ಪುಟಿದೇಳಲು ಆರ್‌ಐಆಎಲ್‌, ಸನ್‌ ಫಾರ್ಮಾ ಶೇರುಗಳು ಕಾರಣವಾದವು. ಕಳೆದ ಆರು ದಿನಗಳಲ್ಲಿ ಸೆನ್ಸೆಕ್ಸ್‌ 878.32 ಅಂಕಗಳ ನಷ್ಟಕ್ಕೆ ಗುರಿಯಾಗಿತ್ತು.

ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 59.95 ಅಂಕಗಳ ಏರಿಕೆಯನ್ನು ದಾಖಲಿಸಿ 11,536.90 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಆಶಾದಾಯಕವಾಗಿ ಕೊನೆಗೊಳಿಸಿತು.

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,890 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು; 1,603 ಶೇರುಗಳು ಮುನ್ನಡೆ ಸಾಧಿಸಿದವು; 1,115 ಶೇರುಗಳು ಹಿನ್ನಡೆಗೆ ಗುರಿಯಾದವು; 172 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ