ಟಿವಿಎಸ್‍ ಮೋಟಾರ್ ಕಂಪೆನಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸುದರ್ಶನ್‍ ವೇಣು ನೇಮಕ

Team Udayavani, May 5, 2022, 9:11 PM IST

ಟಿವಿಎಸ್‍ ಮೋಟಾರ್ ಕಂಪೆನಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಸುದರ್ಶನ್‍ ವೇಣು ನೇಮಕ

ಚೆನ್ನೈ: ದ್ವಿಚಕ್ರ ವಾಹನಗಳು ಮತ್ತು ತ್ರಿಚಕ್ರ ವಾಹನಗಳ ಪ್ರತಿಷ್ಠಿತ ತಯಾರಕ ಟಿವಿಎಸ್ ಮೋಟಾರ್ ಕಂಪನಿಯು ಇಂದು ನಡೆದ ತನ್ನ ಆಡಳಿತ ಮಂಡಳಿಯ ಸಭೆಯಲ್ಲಿ ಸುದರ್ಶನ್ ವೇಣು ಅವರನ್ನು ಕಂಪನಿಯ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ (ಎಂ.ಡಿ) ನೇಮಕ ಮಾಡಿದೆ.

ಸುದರ್ಶನ್ ಅವರು ಟಿವಿಎಸ್‍ ಅನ್ನು, ಭಾರತದ ಮುಂಚೂಣಿಯಲ್ಲಿರುವ ದ್ವಿಚಕ್ರ ವಾಹನ ತಯಾರಕ ಕಂಪೆನಿಯಾಗಿ, ಹೆಚ್ಚು ಪ್ರಶಸ್ತಿ ಪಡೆದ ದ್ವಿಚಕ್ರ ವಾಹನ ಕಂಪನಿಯನ್ನಾಗಿ ರೂಪಿಸಿದ್ದಾರೆ. ಅವರು ಭಾರತದಲ್ಲಿ ಕಂಪನಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ ಮಾತ್ರವಲ್ಲದೇ ಏಷ್ಯಾ, ಆಫ್ರಿಕಾ ಯೂರೋಪಿನಲ್ಲೂ ಕಂಪೆನಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಟಿವಿಎಸ್ ಮೋಟಾರ್ ಕಂಪನಿಯ ಅಧ್ಯಕ್ಷ ಪ್ರೊ.ಸರ್ ರಾಲ್ಫ್ ಡೈಟರ್ ಸ್ಪೆತ್, ಮಾತನಾಡಿ, ಸುದರ್ಶನ್ ಅವರು ಸುಧಾರಿತ ತಂತ್ರಜ್ಞಾನಗಳು ಮತ್ತು ಸುಸ್ಥಿರ ಬೆಳವಣಿಗೆಯ ಬಗ್ಗೆ ಅಪಾರವಾದ ಉತ್ಸಾಹವನ್ನು ಹೊಂದಿದ್ದಾರೆ. ಅವರು ಟಿವಿಎಸ್ ಮೋಟಾರ್‌ನ ಅಂತರರಾಷ್ಟ್ರೀಯ ಬೆಳವಣಿಗೆಯನ್ನು ಮುನ್ನಡೆಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಂಪೆನಿಯನ್ನು ಉತ್ತಮವಾಗಿ ಮುನ್ನಡೆಸುವ ಸಾಮರ್ಥ್ಯ ಅವರಲ್ಲಿದೆ ಅವರ ನಾಯಕತ್ವದೊಂದಿಗೆ, ಕಂಪನಿಯು ಬಲವಾಗಿ ಬೆಳೆಯುತ್ತದೆ ಎಂದು ನನಗೆ ಖಾತ್ರಿಯಿದೆ ಎಂದರು.

ಟಿವಿಎಸ್ ಮೋಟಾರ್ ಕಂಪನಿಯ ವಿಶ್ರಾಂತ ಅಧ್ಯಕ್ಷ ವೇಣು ಶ್ರೀನಿವಾಸನ್ ಮಾತನಾಡಿ, ಸುದರ್ಶನ್ ಅವರು ಕೆಲವು ಪ್ರಮುಖ ಸ್ವಾಧೀನಗಳು ಮತ್ತು ಸಮೂಹ ಕಂಪನಿಗಳ ವಿಸ್ತರಣೆಗೆ ನೇತೃತ್ವ ವಹಿಸಿದ್ದಾರೆ. ಅವರ ನಾಯಕತ್ವದಲ್ಲಿ ಟಿವಿಎಸ್ ಮೋಟಾರ್ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಮೊಬಿಲಿಟಿ ಪ್ಲೇಯರ್ ಆಗಿ ಬದಲಾಗಲಿದೆ ಎಂಬ ವಿಶ್ವಾಸವಿದೆ ಎಂದರು.

ಇದನ್ನೂ ಓದಿ : 532 ಕೋಟಿ ರೂ.ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ ಒಪ್ಪಿಗೆ

ಟಿವಿಎಸ್ ಮೋಟಾರ್ ಕಂಪನಿಯ ನೂತನ್ ವ್ಯವಸ್ಥಾಪಕ ನಿರ್ದೇಶಕ ಸುದರ್ಶನ್ ವೇಣು ಪ್ರತಿಕ್ರಿಯಿಸಿ ಈ ವಿಶೇಷ ಅವಕಾಶಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ ನನ್ನ ತಂದೆ ವೇಣು ಶ್ರೀನಿವಾಸನ್‍ ಮತ್ತು ಸರ್ ರಾಲ್ಫ್ ಅವರ ನಿರಂತರ ಮಾರ್ಗದರ್ಶನ ಮತ್ತು ಮಂಡಳಿ ಮತ್ತು ತಂಡದ ಬೆಂಬಲದೊಂದಿಗೆ, ಕಂಪೆನಿಯನ್ನು ಮತ್ತಷ್ಟು ಮುಂಚೂಣಿಗೆ ತರಲು ಶ್ರಮಿಸುತ್ತೇನೆ ಎಂದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.