ನಾರಾಯಣ ಮೂರ್ತಿ v/s  ವಿಶಾಲ್ ಸಿಕ್ಕಾ ; ಏನಿದು ಇನ್ಫೋಸಿಸ್ ಜಟಾಪಟಿ

Team Udayavani, Aug 18, 2017, 2:56 PM IST

12sikka2.jpg

ಬೆಂಗಳೂರು: ಇನ್ಫೋಸಿಸ್ ಸಿಇಒ ಹಾಗೂ ಆಡಳಿತ ನಿರ್ದೇಶಕ ವಿಶಾಲ್ ಸಿಕ್ಕಾ ಹಾಗೂ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ನಡುವೆ ಭಿನ್ನಾಭಿಪ್ರಾಯ ಗೊತ್ತಿರುವ ವಿಚಾರವೇ, ಆದರೆ ಇದೀಗ ಇನ್ಫೋಸಿಸ್ ಸಿಇಒ ಹುದ್ದೆಗೆ ರಾಜೀನಾಮೆ ನೀಡಿ ಹುದ್ದೆಯಿಂದ ಕೆಳಗಿಳಿದಿರುವ ಸಿಕ್ಕಾ ನಾರಾಯಣ ಮೂರ್ತಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಮೂಲಕ ಇಬ್ಬರ ನಡುವಿನ ಒಳಜಗಳವನ್ನು ಜಗಜ್ಜಾಹೀರುಪಡಿಸಿದ್ದಾರೆ.

ಸಂಸ್ಥೆಯಿಂದ ಕೆಲಸ ತೊರೆಯುತ್ತಿದ್ದ ಉದ್ಯೋಗಿಗಳಿಗೆ ಹೆಚ್ಚಿನ ವೇತನ ನೀಡುತ್ತಿದ್ದ ಬಗ್ಗೆ ಇನ್ಫೋಸಿಸ್‌ ಆಡಳಿತ ಮಂಡಳಿ ಹಾಗೂ ಸ್ಥಾಪಕರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಅಷ್ಟೇ ಅಲ್ಲ ವಿಶಾಲ್ ಸಿಕ್ಕಾ ರಾಜೀನಾಮೆಗೆ ನಾರಾಯಣ ಮೂರ್ತಿ ಅವರ ನಿರಂತರ ಕಿರಿಕಿರಿಯೇ ಕಾರಣ ಎಂದು ಇನ್ಫೋಸಿಸ್ ಆಡಳಿತ ಮಂಡಳಿ ಕೂಡಾ ದೂರಿದೆ.

ಸಿಕ್ಕಾ ಅವರು ಇನ್ಫೋಸಿಸ್ ಆಡಳಿತ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮೇಲೆ ಹಲವಾರು ಮಹತ್ವದ ಬದಲಾವಣೆಗಳನ್ನು ತಂದಿದ್ದರು.  ಇದರ ವಿರುದ್ಧ ಅಸಮಾಧಾನಗೊಂಡಿದ್ದ ನಾರಾಯಣ ಮೂರ್ತಿ ಅವರು ಸಿಕ್ಕಾ ವಿರುದ್ಧ ಪತ್ರ ಚಳವಳಿ ನಡೆಸಿದ್ದರು.

ಕ್ಯಾಲಿಫೋರ್ನಿಯಾ ಮೂಲದ ಟೆಕ್ಕಿ ವಿಶಾಲ್ ಸಿಕ್ಕಾ ಅವರು ಶುಕ್ರವಾರ ಅಚ್ಚರಿಯ ಬೆಳವಣಿಗೆ ಎಂಬಂತೆ ದಿಢೀರ್ ರಾಜೀನಾಮೆ ನೀಡಿದ್ದಾರೆ. 50ರ ಹರೆಯದ ಸಿಕ್ಕಾ ಅವರು ಮೂರು ವರ್ಷಗಳ ಹಿಂದೆ ಇನ್ಫೋಸಿಸ್ ಆಡಳಿತ ನಿರ್ದೇಶಕ ಹಾಗೂ ಸಿಇಒ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸಂಸ್ಥೆಯ ಆದಾಯ ಶೇ.25ರಷ್ಟು ಹೆಚ್ಚಳವಾಗಿದೆ.

ಇನ್ಫೋಸಿಸ್ ಭಾರತದ ನಂ 2 ಸಾಫ್ಟ್ ವೇರ್ ರಫ್ತು ಕಂಪನಿಯಾಗಿದೆ. ಇಂಟರ್ನೆಟ್, ಡಾಟಾ ಬೇಸ್ ಕಂಪನಿಯಾಗಿ ಬೆಳೆದಿರುವ ಇನ್ಫೋಸಿಸ್ ಗೆ ಟಾಟಾ ಕನ್ಸ್ ಲ್ಟೆನ್ಸಿ ಸರ್ವಿಸ್ ಲಿಮಿಟೆಡ್ ಪ್ರಬಲ ಪ್ರತಿಸ್ಫರ್ಧಿ ಕಂಪನಿಯಾಗಿತ್ತು.

ಇಂತಹ ಸ್ಪರ್ಧಾತ್ಮಕ ಬೆಳವಣಿಗೆಯ ನಡುವೆ ಸಿಕ್ಕಾ ಸಿಇಒ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಏತನ್ಮಧ್ಯೆ ಮುಖ್ಯ ಚೀಫ್ ಆಪರೇಟಿಂಗ್ ಅಧಿಕಾರಿ ಪ್ರವೀಣ್ ರಾವ್ ಅವರನ್ನು ಇನ್ಫೋಸಿಸ್ ಸಂಸ್ಥೆಯ ಮಧ್ಯಂತರ ಸಿಇಒ ಆಗಿ ನೇಮಕ ಮಾಡಲಾಗಿದೆ.

ಟಾಪ್ ನ್ಯೂಸ್

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 207 ಅಂಕ ಕುಸಿತ, 18,250ಕ್ಕಿಂತ ಕೆಳಕ್ಕೆ ಕುಸಿದ ನಿಫ್ಟಿ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಅಂಕ ಏರಿಕೆ, 18,200ರ ಗಡಿಯಲ್ಲಿ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಅಂಕ ಏರಿಕೆ, 18,200ರ ಗಡಿಯಲ್ಲಿ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 145 ಅಂಕ ಜಿಗಿತ, 18 ಸಾವಿರದ ಗಡಿ ದಾಟಿದ ನಿಫ್ಟಿ

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆShare

ಹೂಡಿಕೆದಾರರಿಗೆ ನಷ್ಟ: ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 336 ಅಂಕ ಕುಸಿತ, ನಿಫ್ಟಿ ಇಳಿಕೆ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

ಎಸ್‌-400 ಕ್ಷಿಪಣಿ ಖರೀದಿ ಭಾರತಕ್ಕೆ ನಿರ್ಬಂಧ ಬೇಡ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

ಝೈಕೋವ್‌ ಡಿ ದರ ನಿಗದಿ ಅಂತಿಮ: ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.