ಕೊನೆಗೂ ಮುಗಿದ ದುಡ್ಡಿನ ಲೆಕ್ಕಾಚಾರ: ಕಾಂಗ್ರೆಸ್ ನಾಯಕನ ಮನೆಯಲ್ಲಿತ್ತು 353.5 ಕೋಟಿ ರೂಪಾಯಿ

ದುಡ್ಡು ಎಣಿಕೆ ಮಾಡಿ ಅಧಿಕಾರಿಗಳು ಸುಸ್ತೋ ಸುಸ್ತು

Team Udayavani, Dec 11, 2023, 11:02 AM IST

ಕೊನೆಗೂ ಮುಗಿದ ದುಡ್ಡಿನ ಲೆಕ್ಕಾಚಾರ: ಕಾಂಗ್ರೆಸ್ ನಾಯಕನ ಮನೆಯಲ್ಲಿತ್ತು 353.5 ಕೋಟಿ ರೂಪಾಯಿ

ನವದೆಹಲಿ: ಐವತ್ತು ಬ್ಯಾಂಕ್ ಅಧಿಕಾರಿಗಳು, 40 ಎಣಿಕೆ ಯಂತ್ರಗಳು ಜೊತೆಗೆ ಅಧಿಕಾರಿಗಳಿಂದ ಐದು ದಿನಗಳ ದಣಿವರಿಯದ ಹಣ ಎಣಿಕೆ ಕಾರ್ಯಾಚರಣೆ ನಾವು ಹೇಳುತ್ತಿರುವುದು ಯಾವುದೇ ದೇವಸ್ಥಾನ ಹುಂಡಿ ಹಣದ ಲೆಕ್ಕಾಚಾರವಲ್ಲ ಬದಲಾಗಿ ಇದು ಝಾರ್ಖಂಡ್‌ನಿಂದ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಮತ್ತು ಉದ್ಯಮಿ ಧೀರಜ್‌ ಪ್ರಸಾದ್‌ ಸಾಹೂ ನಿವಾಸ ಮತ್ತು ಅವರಿಗೆ ಸೇರಿದ ಕಚೇರಿಗಳ ಮೇಲೆ ಆದಾಯ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಪತ್ತೆಯಾದ ನೋಟಿನ ಕಂತೆಗಳ ಮೌಲ್ಯ.

ಒಡಿಶಾ ಮೂಲದ ಬೌಧ್​ ಮದ್ಯ ತಯಾರಿಕಾ ಕಂಪನಿ ಮತ್ತು ಅದರ ಸಹ ಘಟಕಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ದಾಳಿ ನಡೆಸಿದ ವೇಳೆ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ ಇದನ್ನು ಲಕ್ಕ ಮಾಡಲು ಐವತ್ತು ಬ್ಯಾಂಕ್ ಅಧಿಕಾರಿಗಳನ್ನು ಕರೆಸಲಾಗಿದೆ, ಜೊತೆಗೆ ಹಣ ಲೆಕ್ಕ ಮಾಡಲು 40 ದುಡ್ಡು ಎಣಿಕೆ ಯಂತ್ರಗಳನ್ನು ವ್ಯವಸ್ಥೆ ಮಾಡಿ ಲೆಕ್ಕಾಚಾರ ಮಾಡಲಾಗುತ್ತಿದ್ದು ಐದು ದಿನದ ಬ್ಯಾಂಕ್ ಅಧಿಕಾರಿಗಳು ನಿರಂತರ ಲೆಕ್ಕಾಚಾರದಲ್ಲಿ ತೊಡಗಿದ್ದು ಭಾನುವಾರಕ್ಕೆ ಲೆಕ್ಕಾಚಾರ ಮುಕ್ತಾಯವಾಗಿದ್ದು ಬರೋಬ್ಬರಿ 353.5 ಕೋಟಿ ಲೆಕ್ಕಾಚಾರಕ್ಕೆ ಸಿಕ್ಕಿದೆ.

ಡಿಸೆಂಬರ್ 6 ರಂದು ಅಧಿಕಾರಿಗಳು ಕಚೇರಿ, ಮನೆ ಸೇರಿದಂತೆ ದಾಳಿ ನಡೆಸಿದ ವೇಳೆ ಒಟ್ಟು 176 ಬ್ಯಾಗ್‌ಗಳಲ್ಲಿ ದುಡ್ಡು ಪತ್ತೆಯಾಗಿದ್ದು ಇಷ್ಟು ದೊಡ್ಡ ಮೌಲ್ಯದ ಹಣವನ್ನು ಲೆಕ್ಕಾಚಾರ ಮಾಡಲು ಸ್ಟೇಟ್ ಬ್ಯಾಂಕ್ ಕಳೆದ ಐದು ದಿನಗಳಿಂದ ಬೇರೆಲ್ಲಾ ಕೆಲಸಗಳನ್ನು ಬಾಕಿ ಇಟ್ಟು ದುಡ್ಡು ಎಣಿಕೆ ಕಾರ್ಯ ಆರಂಭಿಸಿತ್ತು ಅದರಂತೆ ಭಾನುವಾರಕ್ಕೆ ಎಲ್ಲಾ ಲೆಕ್ಕಾಚಾರಗಳನ್ನು ಮುಗಿಸುವ ನಿರ್ಧಾರಕ್ಕೆ ಬಂದಿದ್ದು ಅದರಂತೆ ಸುಮಾರು ಐವತ್ತು ಅಧಿಕಾರಿಗಳು ಬಿಡುವಿಲ್ಲದೆ ನಲ್ವತ್ತು ಹಣ ಎಣಿಕೆ ಯಂತ್ರದ ಮೂಲಕ ಹಣ ಎಣಿಕೆ ಕಾರ್ಯಾಚರಣೆ ನಡೆಸಿ ಭಾನುವಾರ ಎಲ್ಲಾ ಲೆಕ್ಕಾಚಾರಗಳನ್ನು ಮುಗಿಸಿ ಒಟ್ಟು 176 ಬ್ಯಾಗ್ ಗಳಲ್ಲಿ 353.5 ರೂಗಳು ಪತ್ತೆಯಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ವ್ಯವಸ್ಥಾಪಕ ಭಗತ್ ಬೆಹೆರಾ ಅವರು ಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಮಾಹಿತಿ ಪ್ರಕಾರ 176 ಬ್ಯಾಗ್‌ಗಳನ್ನು ನಾವು ಸ್ವೀಕರಿಸಿದ್ದು ಅವುಗಳಲ್ಲಿ ಶನಿವಾರದ ವೇಳೆಗೆ 140 ಬ್ಯಾಗ್ ನಲ್ಲಿದ್ದ ದುಡ್ಡಿನ ಎಣಿಕೆ ಮಾಡಲಾಗಿದೆ ಇನ್ನುಳಿದ ಮೂವತ್ತಾರು ಬ್ಯಾಗ್ ನಲ್ಲಿದ್ದ ಹಣವನ್ನು ಭಾನುವಾರ ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದೂ ಇದಕ್ಕಾಗಿ ಮೂರು ಬ್ಯಾಂಕ್ ಗಳ ಐವತ್ತು ಅಧಿಕಾರಿಗಳು ಹಣ ಎಣಿಕೆ ಕಾರ್ಯದಲ್ಲಿ ತೊಡಗಿದ್ದು, 40 ಯಂತ್ರಗಳನ್ನು ನಿಯೋಜಿಸಲಾಗಿದೆ ಅಷ್ಟುಮಾತ್ರವಲ್ಲದೆ ದುಡ್ಡಿನ ಯಂತ್ರ ಕೈಕೊಟ್ಟರೆ ಅದಕ್ಕೆ ಬೇಕಾದ ತಂತ್ರಜ್ಞರನ್ನೂ ವ್ಯವಸ್ಥೆ ಮಾಡಲಾಗಿತ್ತೂ ಎಂದು ಹೇಳಿದ್ದರು.

ದಾಳಿಯಲ್ಲಿ ವಶಪಡಿಸಿಕೊಂಡ ಎಲ್ಲಾ ಹಣವನ್ನು ಆದಾಯ ತೆರಿಗೆ ಇಲಾಖೆಯು ಇಂದು ಬಲಂಗಿರ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮುಖ್ಯ ಶಾಖೆಯಲ್ಲಿ ಠೇವಣಿ ಮಾಡಲಿದೆ. ಇದರೊಂದಿಗೆ ಕಳೆದ ನಾಲ್ಕೈದು ದಿನಗಳಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ಸ್ಥಗಿತಗೊಂಡಿತ್ತು ಇಂದಿನಿಂದ ಆ ಎಲ್ಲ ಕೆಲಸ ಕಾರ್ಯಗಳು ನಿರಂತರವಾಗಿ ಮುಂದುವರೆಯಲಿದೆ ಎಂದು ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Tragic: ಕಿಟಕಿ ಸ್ವಚ್ಛಗೊಳಿಸುವಾಗ ಕಾಲು ಜಾರಿ 5ನೇ ಮಹಡಿಯಿಂದ ಬಿದ್ದು ಗೃಹಿಣಿ ಸಾವು

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.