ಜಮ್ಮು ಕಾಶ್ಮೀರದಲ್ಲಿ ಮುಂದುವರೆದ ಸೇನಾ ಕಾರ್ಯಾಚರಣೆ : ಓರ್ವ ಉಗ್ರನ ಎನ್ಕೌಂಟರ್
Team Udayavani, Oct 10, 2022, 9:07 AM IST
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ನ ತಂಗ್ಪಾವಾ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಈ ಪ್ರದೇಶದಲ್ಲಿ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ.
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಡೆಸಿದ 2 ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿತ್ತು.
ಇದನ್ನೂ ಓದಿ :ಹುಣಸೂರು : ರಾತ್ರಿ ಇಡೀ ಸುರಿದ ಜಡಿ ಮಳೆಗೆ ಬಡಾವಣೆಗಳು ಜಲಾವೃತ, ಜನರ ಪರದಾಟ