ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 10 ಬಿಎಸ್ಎಫ್ ಯೋಧರು ನಾಪತ್ತೆ
Team Udayavani, Jun 28, 2018, 10:31 AM IST
ಮುಘಲ್ಸರಾಯ್ (ಉತ್ತರ ಪ್ರದೇಶ): ಸೇನಾ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 10 ಮಂದಿ ಬಿಎಸ್ಎಫ್ ಸೈನಿಕರು ನಾಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ.
ಪಶ್ಚಿಮ ಬಂಗಾಲದ ಬರ್ಧಮಾನ್ ಮತ್ತು ಜಾರ್ಖಂಡ್ನ ಧಾನಬಾದ್ನಿಂದ ಯೋಧರನ್ನು ಹೊತ್ತಿದ್ದ ಸೇನೆಯ ವಿಶೇಷ ರೈಲು ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ನತ್ತ ಪ್ರಯಾಣ ಬೆಳೆಸಿತ್ತು.
ಮುಘಲ್ಸೆರಾಯ್ನಲ್ಲಿ ಯೋಧರ ತಲೆ ಲೆಕ್ಕಹಾಕುವಾಗ 10 ಮಂದಿ ಕಾಣಿಸಿಕೊಳ್ಳಲಿಲ್ಲ.
ಈ ಬಗ್ಗೆ ಸರ್ಕಾರಿ ರೈಲ್ವೇ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸೇನಾ ಯೋಧರು ರಜೆ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎಂದು ದಾಖಲಿಸಿರುವ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ಬಿಎಸ್ಎಫ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು