ಸಿಐಎಸ್ಎಫ್ ನಲ್ಲಿ ಶೇ.10ರಷ್ಟು ಮೀಸಲು
Team Udayavani, Mar 18, 2023, 7:55 AM IST
ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್ಎಫ್)ಯ ಉದ್ಯೋಗಗಳಲ್ಲಿ ನಿವೃತ್ತ ಅಗ್ನಿವೀರರಿಗೆ ಶೇ.10ರಷ್ಟು ಮೀಸಲು ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಇದೇ ರೀತಿ ಕಳೆದ ವಾರ ಗಡಿ ಭದ್ರತಾ ಪಡೆ(ಬಿಎಸ್ಎಫ್)ಯ ಉದ್ಯೋಗಗಳಲ್ಲಿ ನಿವೃತ್ತ ಅಗ್ನವೀರರಿಗೆ ಶೇ.10ರಷ್ಟು ಮೀಸಲಿಡುವ ಬಗ್ಗೆ ಸಚಿವಾಲಯ ಘೋಷಿಸಿತ್ತು.
1968ರ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಕಾಯ್ದೆಗೆ ತಿದ್ದುಪಡಿ ತಂದ ನಂತರ ಈ ಕುರಿತು ಅಧಿಸೂಚನೆ ಹೊರಡಿಸಲಿರುವ ಸಚಿವಾಲಯ, ಸಿಐಎಸ್ಎಫ್ ಉದ್ಯೋಗಗಳಲ್ಲಿ ಮೊದಲ ಬ್ಯಾಚ್ನ ಅಗ್ನಿವೀರರ ಗರಿಷ್ಠ ವಯೋಮಿತಿ 5 ವರ್ಷ ಸಡಿಲಿಕೆ ಹಾಗೂ ಇತರೆ ಬ್ಯಾಚ್ಗಳ ಅಗ್ನಿವೀರರಿಗೆ ಗರಿಷ್ಠ ವಯೋಮಿತಿ 3 ವರ್ಷ ಸಡಿಲಿಕೆ ಮಾಡಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ