ಕಲ್ಲು ಕ್ವಾರಿಯಲ್ಲಿ ಭಾರೀ ಸ್ಫೋಟ ; 11 ಮಂದಿ ಕಾರ್ಮಿಕರು ಬಲಿ
Team Udayavani, Aug 4, 2018, 9:55 AM IST
ಕರ್ನೂಲ್ : ಜಿಲ್ಲೆಯ ಹಾಥಿ ಬಲ್ಗಲ್ ಎಂಬಲ್ಲಿ ಕಲ್ಲು ಕ್ವಾರಿಯೊಂದರಲ್ಲಿ ಶುಕ್ರವಾರ ರಾತ್ರಿ ಭೀಕರ ಸ್ಫೋಟ ಸಂಭವಿಸಿದ್ದು 11 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಐವರಿಗೆ ಗಂಭೀರ ಸ್ವರೂಪದ ಗಾಯಗಳಿಗೊಳಗಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತದಲ್ಲಿ ಮಡಿದವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.
ಸ್ಫೋಟದ ಬಳಿಕ ಕ್ಷಣಾರ್ಧದಲ್ಲಿ ಬೆಂಕಿ ಸುತ್ತಮುತ್ತಲೂ ವ್ಯಾಪಿಸಿ 3 ಟ್ರ್ಯಾಕ್ಟರ್ಗಳು,ಲಾರಿ ಮತ್ತು ಶೆಟ್ಗಳು ಭಸ್ಮವಾಗಿವೆ ಎಂದು ಕರ್ನೂಲ್ ಎಸ್ಪಿ ತಿಳಿಸಿದ್ದಾರೆ.
ಮೃತರೆಲ್ಲರೂ ಒಡಿಶಾ ಮೂಲದ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.
ಅಗ್ನಿ ಶಾಮಕದಳದ ಸಿಂಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಅವಘಡಕ್ಕೆ ಕಾರಣವಾದವರನ್ನು ಶೀಘ್ರ ಬಂಧಿಸುವುದಾಗಿ ತಿಳಿಸಿದ್ದಾರೆ.
ಘಟನೆ ನಡೆದ ಸಂದರ್ಭದಲ್ಲಿ 30 ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ಸ್ಫೋಟದ ರಭಸಕ್ಕೆ ಅಸುನೀಗಿದವರ ದೇಹದ ಭಾಗಗಳು ಸಿಡಿದು ಬಿದ್ದಿವೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿ ದ್ದಾರೆ. ಘಟನೆ ನಡೆದ 10 ಕಿಮೀ ವ್ಯಾಪ್ತಿ ಯಲ್ಲಿನ ಮನೆಗಳಲ್ಲಿ ಕಂಪನ ಅನುಭವವಾಗಿದೆ. ಅಕ್ರಮವಾಗಿ ಈ ಕ್ವಾರಿಯನ್ನು ನಡೆಸಲಾಗುತ್ತಿತ್ತು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ