11ರ ಬಾಲಕಿ ಮೇಲೆ ಎರಗಿದ್ದ 17 ರಾಕ್ಷಸರು
Team Udayavani, Jul 18, 2018, 9:20 AM IST
ಚೆನ್ನೈ: ಶ್ರವಣದೋಷವಿರುವ 11 ವರ್ಷದ ಬಾಲಕಿ ಮೇಲೆ ಸುಮಾರು 7 ತಿಂಗಳ ಕಾಲ 17 ಮಂದಿ ರಾಕ್ಷಸರು ಸಾಮೂಹಿಕ ಅತ್ಯಾಚಾರಗೈದಿರುವ ಅಮಾನವೀಯ ಘಟನೆಯೊಂದು ಚೆನ್ನೈನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಮಂಗಳವಾರ 17 ಮಂದಿಯನ್ನು ಬಂಧಿಸಿದ್ದಾರೆ. ಬಾಲಕಿಯ ಮನೆಯಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲೇ ಈ ಘಟನೆ ನಡೆದಿದೆ. ಸ್ವತಃ ಅಪಾರ್ಟ್ಮೆಂಟ್ನ ಲಿಫ್ಟ್ ಆಪರೇಟರ್, ಪ್ಲಂಬರ್, ಎಲೆಕ್ಟ್ರೀಷನ್ ಹಾಗೂ ಭದ್ರತಾ ಸಿಬ್ಬಂದಿಯೇ ಈ ಕುಕೃತ್ಯ ನಡೆಸಿದ್ದಾರೆ.
ಅಪಾರ್ಟ್ಮೆಂಟ್ನಲ್ಲಿ ಕೆಲವು ಮನೆಗಳು ಖಾಲಿಯಿದ್ದು, ಬಾಲಕಿಯನ್ನು ಅಲ್ಲಿಗೆ ಹೊತ್ತೂಯ್ಯುತ್ತಿದ್ದ ಆರೋಪಿಗಳು ಆಕೆಗೆ ಮತ್ತುಬರುವ ಔಷಧ ಕುಡಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ಜು.31ರವರೆಗೆ ನ್ಯಾಯಾಂಗ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇದೇ ವೇಳೆ, ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತಂದಾಗ ವಕೀಲರ ಗುಂಪೊಂದು ಆರೋಪಿಗಳನ್ನು ಥಳಿಸಿದ ಘಟನೆಯೂ ನಡೆದಿದೆ. ಜತೆಗೆ, ಆರೋಪಿಗಳ ಪರ ವಕಾಲತ್ತು ವಹಿಸದೇ ಇರಲು ಮದ್ರಾಸ್ ಹೈಕೋರ್ಟ್ ವಕೀಲರ ಸಂಘ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ