ಮಧ್ಯ ಪ್ರದೇಶ : ಎಸ್ಯುವಿ – ವ್ಯಾನ್ ಮುಖಾಮುಖೀ ಢಿಕ್ಕಿ: 12 ಸಾವು
Team Udayavani, Jan 29, 2019, 5:29 AM IST
ಉಜ್ಜೆ„ನ್ : ಮಧ್ಯಪ್ರದೇವದ ಉಜ್ಜೆ„ನ್ ಜಿಲ್ಲೆಯಲ್ಲಿ ವ್ಯಾನ್ ಒಂದು ಇಂದು ನಸುಕಿನ ವೇಳೆ ಎಸ್ಯುವಿ ವಾಹನವೊಂದಕ್ಕೆ ಢಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ ಮೂವರು ಅಪ್ರಾಪ್ತ ವಯಸ್ಸಿನವರ ಸಹಿತ ಒಂದೇ ಕುಟುಂಬದ ಒಟ್ಟು 12 ಮಂದಿ ಮೃತಪಟ್ಟು ಇತರ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವರದಿಯಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ.
ನಸುಕಿನ 12.30ರ ಸುಮಾರಿಗೆ ಈ ಅವಘಡ ರಾಮಗಢ ಪ್ರದೇಶದಲ್ಲಿ ಸಂಭವಿಸಿತು. ಸಂತ್ರಸ್ತರೆಲ್ಲರೂ ಉಜ್ಜೆ„ನ್ ನಿವಾಸಿಗಳು. ಇವರು ನಗದಾ ನಗರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿ ಊರಿಗೆ ಮರಳುತ್ತಿದ್ದರು ಎಂದು ಭೇರೂಗಢ ಪೊಲೀಸ್ ಠಾಣೆಯ ಪ್ರಭಾರಾಧಿಕಾರಿ ಜೈ ಸಿ ರಾಮ್ ಬಾರ್ಡೆ ತಿಳಿಸಿದ್ದಾರೆ.
ಎಸ್ಯುವಿ ವಾಹನಕ್ಕೆ ವ್ಯಾನು ಮುಖಾಮುಖೀ ಢಿಕ್ಕಿ ಹೊಡೆದ ರಭಸಕ್ಕೆ ಎಲ್ಲ 12 ಮಂದಿ ಸ್ಥಳದಲ್ಲೇ ಮೃತಪಟ್ಟರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಇಂದೋರ್ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ಬಾರ್ಡೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ