ಗೋವಾ 12 ಶಾಸಕರ ಅನರ್ಹ ಪ್ರಕರಣ; ಡಿ.10 ಕ್ಕೆ ವಿಚಾರಣೆಯನ್ನು ಮುಂದೂಡಿದ ನ್ಯಾಯಾಲಯ
Team Udayavani, Nov 22, 2021, 7:30 PM IST
ಪಣಜಿ: ಗೋವಾದ ಕಾಂಗ್ರೆಸ್ ಮತ್ತು ಎಂಜಿಪಿ ಪಕ್ಷದಿಂದ ಬಿಜೆಪಿ ಸೇರಿದ್ದ 12 ಶಾಸಕರನ್ನು ಅನರ್ಹಗೊಳಿಸುವಂತೆ ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠದಲ್ಲಿ ಸಲ್ಲಿಸಿದ್ದ ಪ್ರತ್ಯೇಕ ಎರಡು ಅರ್ಜಿಗಳ ವಿಚಾರಣೆಯನ್ನು ಸೋಮವಾರ ಕೈಗೆತ್ತಿಕೊಂಡ ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಡಿಸೆಂಬರ್ 10 ಕ್ಕೆ ಮುಂದೂಡಿದೆ.
ಡಿಸೆಂಬರ್ 10 ರಂದು ಈ ಎರಡೂ ಅರ್ಜಿಗಳ ಅಂತಿಮ ವಿಚಾರಣೆ ನಡೆಯಲಿದೆ.
ಮುಂಬಯಿ ಉಚ್ಛ ನ್ಯಾಯಾಲಯದ ಗೋವಾ ಪೀಠವು ಈ ಎರಡೂ ಅರ್ಜಿಗಳಲ್ಲಿ ನಮೂದಿಸಲಾಗಿರುವ 12 ಶಾಸಕರಿಗೆ ನೋಟಿಸ್ ಜಾರಿಗೊಳಿಸಿದ್ದು, ಇದಕ್ಕೆ ಉತ್ತರಿಸಲು ಡಿಸೆಂಬರ್ 6 ರವರೆಗೆ ಕಾಲಾವಕಾಶ ನೀಡಲಾಗಿದೆ, ಅರ್ಜಿದಾರರಿಗೆ ಉತ್ತರಿಸಲು ಡಿಸೆಂಬರ್ 9 ರ ವರೆಗೆ ಕಾಲಾವಕಾಶ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
2022 ರ ಫೆಬ್ರುವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಪ್ರಕರಣದ ತೀರ್ಪು ಶೀಘ್ರದಲ್ಲಿಯೇ ಹೊರ ಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!