ಬೀದಿ ಬದಿ ವ್ಯಾಪಾರಿಯಲ್ಲಿ ಹಳಸಲು ಆಹಾರ ತಿಂದ 13 ಮಕ್ಕಳು ಆಸ್ಪತ್ರೆಗೆ

Team Udayavani, Mar 12, 2019, 12:28 PM IST

ಜೈಪುರ : ರಾಜಸ್ಥಾನ ದೌಸಾದಲ್ಲಿ ಬೀದಿ ಬದಿ ವ್ಯಾಪಾರಿಯಲ್ಲಿ ಹಳಸಲು ಆಹಾರ ತಿಂದ 13 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿರುವುದಾಗಿ  ಅಧಿಕಾರಿಗಳು ತಿಳಿಸಿದ್ದಾರೆ. 

ಹಳಸಲು ಆಹಾರ ತಿಂದು ಹೊಟ್ಟೆ ನೋವು ಮತ್ತು ವಾಂತಿ ಮಾಡಿಕೊಂಡ ಮಕ್ಕಳನ್ನು ಒಡನೆಯೇ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ಒ ಪಿ ಬೈರವಾ ತಿಳಿಸಿದ್ದಾರೆ. 

ನಿನ್ನೆ ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಹಳಸಿದ ಆಹಾರದ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ