133 ಕೋಟಿ ಡೋಸ್ ಲಸಿಕೆ; ಶನಿವಾರ ಒಂದೇ ದಿನ 81 ಲಕ್ಷ ಡೋಸ್ ನೀಡಿಕೆ
ದಿಲ್ಲಿಯಲ್ಲಿ 2ನೇ ಒಮಿಕ್ರಾನ್ ಸೋಂಕು ದೃಢ
Team Udayavani, Dec 12, 2021, 7:00 AM IST
ಸಾಂದರ್ಭಿಕ ಚಿತ್ರ.
ಹೊಸದಿಲ್ಲಿ: ದೇಶದಲ್ಲಿ ಇದುವರೆಗೆ 133 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ. ಈ ಪೈಕಿ ಶನಿವಾರ ರಾತ್ರಿ 7ರ ವರೆಗೆ 81 ಲಕ್ಷ ಡೋಸ್ ಲಸಿಕೆಗಳನ್ನು ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಟ್ವೀಟ್ ಮಾಡಿದೆ.
ದೇಶದಲ್ಲಿ ಇದುವರೆಗೆ ಮೊದಲ ಡೋಸ್ ಪಡೆದವರ ಒಟ್ಟು ಸಂಖ್ಯೆ 81.41 ಕೋಟಿಗೆ ಏರಿದ್ದರೆ ಎರಡನೇ ಡೋಸ್ ಪಡೆದವರ ಸಂಖ್ಯೆ 51.41 ಕೋಟಿ ಎಂದು ತಿಳಿಸಿದೆ.
ಈ ನಡುವೆ ಹೊಸದಿಲ್ಲಿಯಲ್ಲಿ ಶನಿವಾರ ಒಮಿಕ್ರಾನ್ನ ಎರಡನೇ ಪ್ರಕರಣ ದೃಢಪಟ್ಟಿದೆ. ಹೀಗಾಗಿ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಪಣಜಿಗೆ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಐವರಿಗೆ ಸೋಂಕು ಪತ್ತೆ ಪರೀಕ್ಷೆ ನಡೆಸಲಾಗಿದ್ದು, ಅವರಿಗೆ ನೆಗೆಟಿವ್ ಬಂದಿದೆ.
ಪಂಚ ನದಿ ಯೋಜನೆಗೆ ಮೋದಿ ಚಾಲನೆ; 45 ವರ್ಷಗಳ ಬಳಿಕ ಪಶ್ಚಿಮ ಉ.ಪ್ರ.ದ ಪ್ರಮುಖ ಯೋಜನೆಗೆ ಚಾಲನೆ
ಮಹಾರಾಷ್ಟ್ರದಲ್ಲಿ ಶನಿವಾರ ಕೊರೊನಾದ ಹೊಸ ರೂಪಾಂತರಿ ಪ್ರಕರಣ ದೃಢಪಟ್ಟಿಲ್ಲ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಶನಿವಾರ ಮುಂಬಯಿಯಲ್ಲಿ ತಿಳಿಸಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ ಹೊಸ ರೂಪಾಂತರಿಯ ಒಟ್ಟು ಪ್ರಕರಣಗಳ ಸಂಖ್ಯೆ 17 ಆಗಿದೆ.
ಹೊಸ ಕಿಟ್ ಅಭಿವೃದ್ಧಿ
ಐಸಿಎಂಆರ್ ಕೇವಲ 2 ತಾಸುಗಳಲ್ಲಿ ಒಮಿಕ್ರಾನ್ ರೂಪಾಂತರಿ ಪತ್ತೆ ಹಚ್ಚುವ ಹೊಸ ಕಿಟ್ ಅಭಿವೃದ್ಧಿಪಡಿಸಿದೆ. ಅಸ್ಸಾಂನ ದಿಬ್ರೂಗಢದಲ್ಲಿರುವ ಐಸಿಎಂಆರ್ನ ಶಾಖೆ ಈ ಸಾಧನೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ