Tragedy: ಟ್ರಕ್, ಬಸ್ ನಡುವೆ ಭೀಕರ ಅಪಘಾತ: 14 ಮಂದಿ ಸ್ಥಳದಲ್ಲೇ ಮೃತ್ಯು, 27 ಮಂದಿಗೆ ಗಾಯ
Team Udayavani, Jan 3, 2024, 9:21 AM IST
ದಿಸ್ಪುರ: 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 14 ಜನರು ಮೃತಪಟ್ಟಿದ್ದು ಮತ್ತು 27 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ ದೇರ್ಗಾಂವ್ನಲ್ಲಿ ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದೆ.
ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ 45 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಪ್ರವಾಸಿ ಬಸ್ ದೇರ್ಗಾಂವ್ನಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಂಜಾನೆ ಮೂರೂ ಗಂಟೆಗೆ ಪ್ರವಾಸಿಗರನ್ನು ಹೊತ್ತು ಬಸ್ ಹೊರಟಿತ್ತು ಈ ವೇಳೆ ಮಾರ್ಗರಿಟಾದಿಂದ ಕಲ್ಲಿದ್ದಲು ಹೇರಿಕೊಂಡು ಬರುತ್ತಿದ್ದ ಟ್ರಕ್ ಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ ಘಟನೆ ಸಂಭವಿಸಿದ ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿ ಜೋರ್ಹತ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿದ್ದಾರೆ. ಗಾಯಗೊಂಡಿರುವ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
14 ಪ್ರಯಾಣಿಕರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Illegal Mining: ಜಾರ್ಖಂಡ್ ಸಿಎಂ ಆಪ್ತ ಸೇರಿದಂತೆ ಹಲವು ಅಧಿಕಾರಿಗಳ ನಿವಾಸದ ಮೇಲೆ ಇಡಿ ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ