ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ 15 ವರ್ಷದ ಬಾಲಕ!
Team Udayavani, Oct 28, 2021, 1:11 PM IST
ಮಲಪ್ಪುರಂ: ಮಹಿಳೆಯ ಮೇಲೆ 15 ವರ್ಷದ ಬಾಲಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಕೇರಳದ ಮಲ್ಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಮಧ್ಯಾಹ್ನ ಕಂಪ್ಯೂಟರ್ ತರಗತಿಗೆ ಹೋಗುತ್ತಿದ್ದ ಮಹಿಳೆಯನ್ನು ಆರೋಪಿಯು ಹಿಂಬಾಲಿಸಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಷಲ್ ಆರ್ಟ್ ಜೂಡೋ ಗೊತ್ತಿದ್ದ ಆರೋಪಿಯು, ಸಂತ್ರಸ್ಥೆ ಯುವತಿಯನ್ನು ರಸ್ತೆ ಪಕ್ಕದ ತೋಟಕ್ಕೆ ಎಳೆದೊಯ್ದಿದ್ದಾನೆ. ಆಕೆಯ ತಲೆಗೆ ಕಲ್ಲಿನಿಂದ ಹೊಡೆದು, ಆಕೆಯ ದುಪಟ್ಟಾವನ್ನು ಬಳಸಿ ಕೈಗಳನ್ನು ಕಟ್ಟಿ, ನಂತರ ಉಸಿರುಗಟ್ಟಿಸಲು ಪ್ರಯತ್ನಿಸಿದ ಎಂದು ಮಲಪ್ಪುರಂನ ಜಿಲ್ಲಾ ಪೊಲೀಸ್ ಮುಖ್ಯಸ್ಥ ಸುಜಿತ್ ದಾಸ್ ಎಸ್ ಹೇಳಿದ್ದಾರೆ.
ಇದನ್ನೂ ಓದಿ:ಯೂಟ್ಯೂಬ್ ನೋಡಿ ಸ್ವಯಂ ಹೆರಿಗೆ ಮಾಡಿಕೊಂಡ 17 ರ ತರುಣಿ !!
“ಇದು ವಿರಳ ಜನಸಂಖ್ಯೆಯ ಪ್ರದೇಶವಾಗಿತ್ತು, ಆ ಸಮಯದಲ್ಲಿ ಯಾರೂ ಇರಲಿಲ್ಲ. ಆರೋಪಿಯ ಕೃತ್ಯವನ್ನು ಮಹಿಳೆ ವಿರೋಧಿಸಿದ್ದು, ಆತನಿಂದ ತಪ್ಪಿಸಿಕೊಂಡು ಹತ್ತಿರದ ಮನೆಗೆ ಓಡಿಹೋದರು”ಎಂದು ಪೊಲೀಸ್ ಅಧಿಕಾರಿ ಹೇಳಿದರು.
ಮಂಗಳವಾರ ಬೆಳಗ್ಗೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು ಬುಧವಾರ ಬಾಲಕನನ್ನು ಬಾಲನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವೈದ್ಯಕೀಯ ಪ್ರಕ್ರಿಯೆಗಳಿಗಾಗಿ ಆತನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ