ಅಬ್ಬಾ ..! ಗುಜರಾತ್ನಲ್ಲಿ 3,500 ಕೋಟಿ ರೂ ಮೌಲ್ಯದ ಹೆರಾಯಿನ್ ಜಪ್ತಿ
Team Udayavani, Jul 30, 2017, 2:27 PM IST
ಸೂರತ್ : ಮಹತ್ವದ ಕಾರ್ಯಾಚರಣೆ ನಡೆಸಿದ ಕರಾವಳಿ ರಕ್ಷಣಾ ಪಡೆಗಳು ಹಡಗಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3,500 ಕೋಟಿ ರೂಪಾಯಿ ಮೌಲ್ಯದ 1,500 ಕೆ.ಜಿ ಹೆರಾಯಿನ್ ಮಾದಕ ವಸ್ತುವನ್ನು ಭಾನುವಾರ ಜಪ್ತಿ ಮಾಡಿದ್ದಾರೆ.
ವಶಪಡಿಸಿಕೊಂಡಿರುವ ಮಾದಕ ವಸ್ತು ಭಾರತದ ಇತಿಹಾಸದಲ್ಲೇ ದೊಡ್ಡ ಪ್ರಮಾಣದ್ದು ಎಂದು ವರದಿಯಾಗಿದೆ. ಪನಾಮಾಕ್ಕೆ ಹಡಗಿ ನಲ್ಲಿ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ.
ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ಶುಕ್ರವಾರ ರಾತ್ರಿ ಹಡಗನ್ನು ಸುತ್ತುವರಿದು ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವೇಳೆ ಹಡಗಿನಲ್ಲಿದ್ದ ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಕರಾವಳಿ ರಕ್ಷಣಾ ಪಡೆ, ಗುಪ್ತಚರ ಇಲಾಖೆ ,ಪೊಲೀಸರು, ಕಸ್ಟಮ್ಸ್ ಅಧಿಕಾರಿಗಳು,ನೌಕಾಪಡೆ ಮತ್ತು ಇತರ ಭದ್ರತಾ ಸಂಸ್ಥೆಗಳು ಈ ಬಗ್ಗೆ ತನಿಖೆ ನಡೆಸುತ್ತಿವೆ.
ಇಷ್ಟೊಂದು ಪ್ರಮಾಣದಲ್ಲಿ ಮಾದಕವಸ್ತು ಸಾಗಿಸಲು ಭಾರೀ ಜಾಲವೇ ತೊಡಗಿಸಿಕೊಂಡಿರುವುದು ಸ್ಪಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ