ಪತ್ನಿಯ ಶೀಲ ಶಂಕಿಸಿ 2 ತಿಂಗಳ ಮಗುವನ್ನೇ ಕೊಂದ ಅಪ್ರಾಪ್ತ! 

Team Udayavani, Apr 22, 2018, 8:52 AM IST

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಮಂಗೋಲ್‌ಪುರಿ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದ ಅತ್ಯಂತ ಅಮಾನುಷ ಮತ್ತು ಕಳವಳಕಾರಿ  ಘಟನೆಯೊಂದರಲ್ಲಿ ಅಪ್ರಾಪ್ತ ವಯಸ್ಕನೋರ್ವ  ತನ್ನ  2 ತಿಂಗಳ ಮಗುವನ್ನು ಬರ್ಬರವಾಗಿ ಹತ್ಯೆಗೈದಿದ್ದಾನೆ. 

ತನ್ನ ಪತ್ನಿಯ ಅನೈತಿಕ ಸಂಬಂಧದಿಂದಾಗಿ  ಈ ಮಗು ಹುಟ್ಟಿದೆ ಎಂದು ಪತ್ನಿ ಮನೆಯಲ್ಲಿ ಮಗುವನ್ನು ಬಿಟ್ಟು ಕೆಲಸ ಹುಡುಕಲೆಂದು ಹೊರೆಗೆ ತೆರಳಿದ ವೇಳೆ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾನೆ. 

ಮನೆಗೆ ಮರಳಿದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದುದನ್ನು ಕಂಡು ಬೆಚ್ಚಿ ಬಿದ್ದ ತರುಣಿ  ಕೂಡಲೇ ಆಸ್ಪತ್ರೆಗೆ ದೌಡಾಯಿಸಿದ್ದಾಳೆ. ಅಲ್ಲಿ ಮಗು ಮೃತ ಪಟ್ಟಿರುವುದನ್ನು ವೈದ್ಯರು ಧೃಡಪಡಿಸಿದ್ದಾರೆ. 

ಪೊಲೀಸರಿಗೆ ದೂರು ನೀಡಿದ ಬಳಿಕ ಕೂಡಲೇ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಪೊಲೀಸರ ಬಳಿ ನನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ.ಅದರಿಂದಾಗಿಯೇ ಮಗು ಹುಟ್ಟಿದೆ ಹೀಗಾಗಿ  ಕೊಲೆಗೈದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ. 

ಇಬ್ಬರು ಅಪ್ರಾಪ್ತ ವಯಸ್ಕರಾಗಿದ್ದು 10 ತಿಂಗಳ ಹಿಂದೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ. 


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ದಾವಣಗೆರೆ: ಅಂತೂ ಇಂತೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ ಸ್ಮಾರ್ಟ್‌ಸಿಟಿ ಯೋಜನೆಯಡಿ 28.5 ಕೋಟಿ ವೆಚ್ಚದಲ್ಲಿ ಖಾಸಗಿ ಬಸ್‌ ನಿಲ್ದಾಣ ಕಾಮಗಾರಿಗೆ ಮುಹೂರ್ತ...

  • ಬ್ಯಾಡಗಿ: ಅರಿಯದೇ ಮಾಡಿದ ತಪ್ಪನ್ನು ಜವಾಬ್ದಾರಿಯುತ ನಾಗರಿಕ ಸಮಾಜ ಮನ್ನಿಸುತ್ತಿಲ್ಲ, ಹೀಗಾಗಿ ಎಚ್‌ಐವಿ(ಏಡ್ಸ್‌) ಸೋಂಕಿತರು ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ....

  • ದಾವಣಗೆರೆ: ಗ್ರಾಮ ಮಟ್ಟದಲ್ಲೂ ವೃದ್ಧಾಪ್ಯ, ವಿಧವಾ ವೇತನದ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪ ಗುರುವಾರ ಮಮತಾ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ...

  • ಕಲಬುರಗಿ: ಕೇಬಲ್‌, ಸೆಟಲೈಟ್‌ ಮೂಲಕ ಪ್ರಸಾರ ಹೊಂದಿರುವ ಟೆಲಿವಿಷನ್‌ ನ್ಯೂಸ್‌ ಮತ್ತು ಮನರಂಜನೆ ಟಿವಿ ಚಾನೆಲ್‌ಗ‌ಳಲ್ಲಿ ಆಕ್ಷೇಪಾರ್ಹ ದೃಶ್ಯಗಳು ಪ್ರಸಾರವಾದಲ್ಲಿ...

  • ರೋಣ: ಪಟ್ಟಣದ ಗೌಡರ ಓಣಿ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನುಶಿ (ಹುಳ), ಕಲ್ಲು ಇರುವ ಕಳಪೆ ಮಟ್ಟದ ಬಿಸಿಯೂಟ ಪೂರೈಸುತ್ತಿರುವುದರಿಂದ ಮಕ್ಕಳು...