47ಗಂಟೆಗಳ ರಕ್ಷಣಾ ಕಾರ್ಯ..ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆ
Team Udayavani, Mar 22, 2019, 1:36 PM IST
ಹರ್ಯಾಣ; 18 ತಿಂಗಳ ಗಂಡು ಮಗುವೊಂದು ಬರೋಬ್ಬರಿ 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಘಟನೆ ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ಬುಧವಾರ ನಡೆದಿತ್ತು. ಕೊನೆಗೂ 47 ಗಂಟೆಗಳ ಸತತ ಕಾರ್ಯಾಚರಣೆ ಮೂಲಕ ಮಗುವನ್ನು ರಕ್ಷಿಸಿ ಶುಕ್ರವಾರ ಯಶಸ್ವಿಯಾಗಿ ಹೊರತೆಗೆದಿದ್ದಾರೆ.
ಬೋರ್ ವೆಲ್ ಒಳಗೆ ಬಿದ್ದಿದ್ದ ಮಗುವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದ್ದು, ಮಗು ಆರೋಗ್ಯದಿಂದ ಇದೆ ಎಂದು ಹಿಸಾರ್ ನ ಡೆಪ್ಯುಟಿ ಕಮೀಷನರ್ ಅಶೋಕ್ ಕುಮಾರ್ ಮೀನಾ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಇಂಡಿಯನ್ ಆರ್ಮಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಸಿಬ್ಬಂದಿಗಳು ಹಾಗೂ ಸ್ಥಳೀಯ ಅಧಿಕಾರಿಗಳು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಹಿಸಾರ್ ನ ಬಾಲ್ ಸಮಂದ್ ಗ್ರಾಮದ ಸಮೀಪ ಗ್ರಾಮದಲ್ಲಿ ಈ ಘಟನೆ ನಡೆದಿತ್ತು.
60 ಅಡಿ ಆಳದ ಕೊಳವೆ ಬಾವಿಗೆ ಒಂದೂವರೆ ವರ್ಷದ ನದೀಮ್ ಖಾನ್ ಎಂಬ ಮಗು ಬಿದ್ದಿತ್ತು. ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿ ಬೋರ್ ವೆಲ್ ಒಳಗೆ ಆಕ್ಸಿಜನ್ ಇಳಿಸಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದು ಮೀನಾ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್