ಹೊಂಚು ದಾಳಿ: 5 ಯೋಧರು ಹುತಾತ್ಮ; 3 ಉಗ್ರರು ಫಿನಿಶ್
Team Udayavani, Dec 31, 2017, 11:48 AM IST
ಶ್ರೀನಗರ: ಪ್ರತ್ಯೇಕ ಘಟನೆಗಳಲ್ಲಿ ಐವರು ಭಾರತೀಯ ಯೋಧರು ಹುತಾತ್ಮರಾದ ಘಟನೆ ಭಾನುವಾರ ನಡೆದಿದೆ.
ಪುಲ್ವಮಾ ಸೆಕ್ಟರ್ನಲ್ಲಿ ಸಿಆರ್ಪಿಎಫ್ ಕ್ಯಾಂಪ್ ಮೇಲೆ ಜೆಇಎಮ್ ಉಗ್ರರು ದಾಳಿ ನಡೆಸಿದ್ದು ಕನಿಷ್ಠ ನಾಲ್ವರು ಯೋಧರು ಹುತಾತ್ಮರಾಗಿದ್ದು, ಇನ್ನೊಂದೆಡೆ ಗಡಿ ನಿಯಂತ್ರಣ ರೇಖೆಯ ದಿಗ್ವಾರ್ ಸೆಕ್ಟರ್ನಲ್ಲಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಓರ್ವ ಯೋಧ ಹುತಾತ್ಮರಾಗಿರುವ ಬಗ್ಗೆ ಸೇನಾ ಮೂಲಗಳು ತಿಳಿಸಿವೆ.
ಕ್ಯಾಂಪ್ ಮೇಲೆ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ದಾಳಿ ನಡೆಸಿದ್ದು ಗುಂಡಿನ ದಾಳಿಗೆ ನಾಲ್ವರು ಯೋಧರು ಹುತಾತ್ಮರಾದರೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ಯಾಂಪ್ನಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹೊಡೆದುರಿಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಗಡಿಯಲ್ಲಿ ಪಾಕ್ ದಾಳಿಗೆ ಭಾರತೀಯ ಸೇನಾ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ ಎಂದು ವರದಿಯಾಗಿದೆ.
ಡಿಸೆಂಬರ್ 23 ರಂದು ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು