ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಓರ್ವ ಸಾವು
Team Udayavani, Sep 14, 2022, 8:15 PM IST
ಪಾಟ್ನಾ/ಬೆಗುಸರೈ: ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಲವೆಡೆ ಗುಂಡಿನ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬಿಹಾರದ ಬೆಗೂಸರಾಯ್ ನಗರದಲ್ಲಿ ಬುಧವಾರ ನಡೆದಿದೆ.
ಘಟನೆಯಲ್ಲಿ ಕನಿಷ್ಠ 11 ಮಂದಿ ಗಾಯಗೊಂಡು ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ಅಮೆರಿಕ ಮಾದರಿಯ ಘಟನೆ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಬೆಳವಣಿಗೆ ಬಿಹಾರದಲ್ಲಿ ರಾಜಕೀಯದ ಕಾವು ಪಡೆದುಕೊಂಡಿದೆ. ಈ ಕುರಿತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮಾತನಾಡಿ “ಮಹಾಘಟಬಂಧನ ಸರ್ಕಾರ ರಚನೆಯಾದಾಗಲೆಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತದೆ. ಆರೋಪಿಗಳು 30ಕಿ.ಮೀ. ದೂರ ಪ್ರಯಾಣಿಸುತ್ತಾ ಗುಂಡಿನ ದಾಳಿ ನಡೆಸಿದ್ದರೂ ಅವರನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಸಾಧ್ಯವಾಗಿಲ್ಲ’ ಎಂದು ತಿಳಿಸಿದ್ದಾರೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಡಿಜಿಪಿ ಜತೆ ಮಾತನಾಡಿ, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಏಳು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು