Lightning Strikes: ಗುಜರಾತ್ ನಲ್ಲಿ ಮಳೆಯ ಅಬ್ಬರ… ಸಿಡಿಲು ಬಡಿದು 20 ಮಂದಿ ಮೃತ್ಯು


Team Udayavani, Nov 27, 2023, 9:45 AM IST

lightning strikes: ಗುಜರಾತ್: ಮಳೆಯ ಅಬ್ಬರದ ನಡುವೆ ಸಿಡಿಲು ಬಡಿದು 20 ಮಂದಿ ಮೃತ್ಯು

ಗಾಂಧಿನಗರ: ಗುಜರಾತಿನಲ್ಲಿ ಭಾನುವಾರ ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು ಬಡಿದು 20 ಜನರು ಮೃತಪಟ್ಟಿದ್ದು ಜೊತೆಗೆ ಹಲವಾರು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಜರಾತಿನಲ್ಲಿ ಭಾನುವಾರ ಬೆಳಗ್ಗೆಯಿಂದ ಸುರಿದ ಅಕಾಲಿಕ ಮಳೆ ಹಲವಾರು ಅನಾಹುತಗಳನ್ನು ತಂದಿದ್ದು. ಹಲವು ಪ್ರದೇಶಗಳಲ್ಲಿ ಸಿಡಿಲು ಬಡಿದು ಪ್ರಾಣಹಾನಿಯೂ ಸಂಭವಿಸಿದ ವರದಿಯಾಗಿದೆ. ಸೌರಾಷ್ಟ್ರದ ಬಹುತೇಕ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು ಬೆಳೆಗಳು ಹಾನಿಯಾಗಿವೆ ಎನ್ನಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಗುಜರಾತ್‌ನಲ್ಲಿ ಅಕಾಲಿಕ ಮಳೆ ಮತ್ತು ಆಲಿಕಲ್ಲು ಮಳೆಯಾಗಿದೆ. ವಿಪತ್ತು ನಿರ್ವಹಣಾ ಇಲಾಖೆಯ ಸರ್ಕಾರಿ ಅಂಕಿಅಂಶಗಳ ಪ್ರಕಾರ, ಅಕಾಲಿಕ ಮಳೆಯಿಂದಾಗಿ ಸಿಡಿಲು ಬಡಿದು ಒಟ್ಟು ೨೦ ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ ಸುಮಾರು 10 ಮಂದಿ ಗಾಯಗೊಂಡಿದ್ದಾರೆ. ಅಷ್ಟುಮಾತ್ರವಲ್ಲದೆ 40 ಪ್ರಾಣಿಗಳೂ ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ವಿಪತ್ತು ನಿರ್ವಹಣೆಯ ಅಧಿಕಾರಿಗಳ ಪ್ರಕಾರ, ರಾತ್ರಿ 8 ಗಂಟೆಯವರೆಗೆ ಸೂರತ್ ಮತ್ತು ಚುರಾ ತಹಸಿಲ್‌ನಲ್ಲಿ ಸುಮಾರು 4 ಇಂಚು ಮಳೆಯಾಗಿದೆ. ಆಲಿಕಲ್ಲು ಮಳೆಗೆ ಹಲವೆಡೆ ಬೆಳೆ ನಾಶವಾಗಿದೆ. ಸಿಡಿಲು ಬಡಿದು ೨೦ ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ದಾಹೋಡ್‌ನಲ್ಲಿ 3, ಭರೂಚ್‌ನಲ್ಲಿ 2, ಸೂರತ್‌ನಲ್ಲಿ 1, ದ್ವಾರಕಾದಲ್ಲಿ 1, ಪಂಚಮಹಲ್‌ನಲ್ಲಿ 1, ಸುರೇಂದ್ರನಗರದಲ್ಲಿ 1, ಅಮ್ರೇಲಿಯಲ್ಲಿ 1, ಖೇಡಾದಲ್ಲಿ 1, ಅಹಮದಾಬಾದ್‌ ಗ್ರಾಮಾಂತರದಲ್ಲಿ 1, ಸಬರಕಾಂತದಲ್ಲಿ 1, ಬೋಟಾಡ್‌ನಲ್ಲಿ 1 ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ರಾಜ್‌ಕೋಟ್‌ನ ಖಂಡೇರಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಲವಾದ ಗಾಳಿ ಮತ್ತು ಆಲಿಕಲ್ಲು ಮಳೆಯಿಂದಾಗಿ ಮೀಡಿಯಾ ಬಾಕ್ಸ್ ಮುರಿದುಹೋಗಿದೆ. ಕ್ರೀಡಾಂಗಣದಲ್ಲಿ ಅಂದಾಜು 1.5 ರಿಂದ 2 ಕೋಟಿ ರೂ.ನಷ್ಟ ಉಂಟಾಗಲಿದೆ ಎಂದು ಅಂದಾಜಿಸಲಾಗಿದೆ. ವೈಬ್ರಂಟ್ ಗುಜರಾತ್‌ಗಾಗಿ ಜಪಾನ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರಾಜ್ಯದ ಕೃಷಿ ಸಚಿವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ರೈತರು ಅನುಭವಿಸಿದ ನಷ್ಟದ ಬಗ್ಗೆ ಚರ್ಚಿಸಿದರು.

ಎಸ್‌ಇಒಸಿ ಮಾಹಿತಿಯ ಪ್ರಕಾರ, ಗುಜರಾತ್‌ನ ಸೂರತ್, ಸುರೇಂದ್ರನಗರ, ಖೇಡಾ, ತಾಪಿ, ಭರೂಚ್ ಮತ್ತು ಅಮ್ರೇಲಿ ಜಿಲ್ಲೆಗಳಲ್ಲಿ 16 ಗಂಟೆಗಳಲ್ಲಿ 50-117 ಮಿಮೀ ಮಳೆ ದಾಖಲಾಗಿದೆ. ಸೋಮವಾರದಿಂದ ಮಳೆಯ ಪ್ರಮಾಣ ಕ್ರಮೇಣ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Miracle: ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ… ವಿಸ್ಮಯ ಕಣ್ತುಂಬಿಕೊಂಡ ಭಕ್ತರು

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.