2019ರ ಲೋಕಸಭಾ ಚುನಾವಣೆ: ಮಾರ್ಚ್ ಮೊದಲ ವಾರ ವೇಳಾ ಪಟ್ಟಿ ಪ್ರಕಟ
Team Udayavani, Jan 28, 2019, 1:11 PM IST
ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಯ ವೇಳಾ ಪಟ್ಟಿ ಬಹುತೇಕ ಮಾರ್ಚ್ ಮೊದಲ ವಾರ ಪ್ರಕಟವಾಗಲಿದೆ. ಚುನಾವಣೆ ಎಪ್ರಿಲ್ – ಮೇ ತಿಂಗಳಲ್ಲಿ ನಡೆಯಲಿದೆ.
ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಮತ್ತು ಚುನಾವಣಾ ಧಿಕಾರಿಗಳಿಗೆ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ಕುರಿತಾಗಿ ಪತ್ರ ಬರೆದಿದೆ.
ಚುನಾವಣಾ ಆಯೋಗದ ಈ ಪತ್ರದಲ್ಲಿ ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯ ವಿಧಾನಸಭಾ ಚುನಾವಣೆಗಳ ಬಗ್ಗೆ ಉಲ್ಲೇಖವಿದೆ. ಈ ರಾಜ್ಯಗಳ ವಿಧಾನಸಭಾ ಚುನಾವಣೆ ಈ ವರ್ಷವೇ ನಡೆಯಲಿಕ್ಕಿದೆ. ಹಾಲಿ ಲೋಕಸಭೆಯ ಅವಧಿ ಜೂನ್ 3ರಂದು ಕೊನೆಗೊಳ್ಳಲಿದೆ.
2014ರ ಲೋಕಸಭಾ ಚುನಾವಣೆ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಆ ವರ್ಷ ಮಾರ್ಚ್ 5ರಂದು ಪ್ರಕಟಿಸಿತ್ತು ಮತ್ತು ಎಪ್ರಿಲ್ – ಮೇ ತಿಂಗಳಲ್ಲಿ ಒಟ್ಟು 9 ಹಂತಗಳಲ್ಲಿ ಲೋಕಸಭಾ ಚುನವಾಣೆಯನ್ನು ನಡೆಸಿತ್ತು. ಮೊದಲ ಹಂತದ ಮತದಾನ ಎಪ್ರಿಲ್ 7ರಂದು ನಡೆದಿತ್ತು; ಕೊನೇ ಹಂತದ ಮತದಾನ ಮೇ 12ರಂದು ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ