
ಸ್ಟಾರ್ಟ್‌ಅಪ್ ಕಂಪನಿಗಳ ಶೇ.25ರಷ್ಟು ಮಾಲೀಕರು ಭಾರತೀಯರು: ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Sep 12, 2022, 7:35 AM IST

ನವದೆಹಲಿ: ಜಗತ್ತಿನ ಟಾಪ್ 58 ಕಂಪನಿಗಳ ಸಿಇಒಗಳು ಭಾರತೀಯ ಮೂಲದವರು. ಐಟಿ ಕ್ಷೇತ್ರದ ಸ್ಟಾರ್ಟ್‌ಅಪ್ ಕಂಪನಿಗಳ ಶೇ.25ರಷ್ಟು ಮಾಲೀಕರು ಭಾರತೀಯರು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಕಾಂಚೀಪುರದ ಭಾರತೀಯ ಮಾಹಿತಿ ತಂತ್ರಜ್ಞಾನ, ವಿನ್ಯಾಸ ಮತ್ತು ಉತ್ಪಾದನೆ ಸಂಸ್ಥೆಯ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, “ಜಗತ್ತಿನ ಟಾಪ್ 500 ಕಂಪನಿಗಳಲ್ಲಿ ಅಮೆರಿಕದ ನಂತರ ಅತಿ ಹೆಚ್ಚು ಸಿಇಒಗಳು ಭಾರತೀಯರಾಗಿದ್ದಾರೆ” ಎಂದರು.
ಗೂಗಲ್ ಸಿಇಒ ಸುಂದರ್ ಪಿಚೈ, ಟ್ವಿಟರ್ ಸಿಇಒ ಪರಾಗ್ ಅಗರ್‌ವಾಲ್ ಸೇರಿದಂತೆ ಬಹುರಾಷ್ಟ್ರೀಯ ಕಂಪನಿಗಳ ಅನೇಕ ಸಿಇಒಗಳು ಭಾರತೀಯರಾಗಿದ್ದಾರೆ. ವಿಶ್ವಸಂಸ್ಥೆಯ ಡೇಟಾ ಪ್ರಕಾರ, 2036ರಲ್ಲಿ ಭಾರತದ ಒಟ್ಟು ಜನಸಂಖ್ಯೆಯ ಶೇ.65ರಷ್ಟು ಮಂದಿ ದುಡಿಯುವ ವರ್ಗದವಾಗಿರುತ್ತಾರೆ. ಇದು 2047ರವರೆಗೂ ಮುಂದುವರಿಯಲಿದೆ. ಇದು ದೇಶದ ಜಿಡಿಪಿಗೆ ಕೊಡುಗೆ ನೀಡಲು ಸಹಕಾರಿ. ಸರಿಯಾದ ಕೌಶಲ, ತರಬೇತಿ ಮತ್ತು ಸಮಾನ ಅವಕಾಶಗಳಿಂದ ಮಾತ್ರ ಇದು ಸಾಧ್ಯವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರದ ಪ್ರಗತಿಗಾಗಿ ಜಾತಿ ಮತ್ತು ಪ್ರಾದೇಶಿಕ ತಾರತಮ್ಯವನ್ನು ತೊಡೆದುಹಾಕಿ: ಯೋಗಿ ಆದಿತ್ಯನಾಥ್

ಒಡಿಶಾ ಸಚಿವನ ಹತ್ಯೆ: ಸಿಬಿಐ ತನಿಖೆಗೆ ಆಗ್ರಹ

ಬಿಜೆಪಿ ಜೊತೆಗೆ ಮೈತ್ರಿಗಿಂತ ಸಾಯುವುದು ಲೇಸು: ನಿತೀಶ್ ಕುಮಾರ್

ಮೋದಿ ಸರ್ಕಾರದ ಡಿಡಿಎಲ್ಜೆಯಲ್ಲಿ ಸಚಿವ ಜೈಶಂಕರ್ ನಟನೆ: ಜೈರಾಮ್ ರಮೇಶ್

ಗೋರಖ್ನಾಥ್ ದೇಗುಲ ದಾಳಿ: ಆರೋಪಿ ಅಹ್ಮದ್ ಮುರ್ತಾಜಾಗೆ ಮರಣದಂಡನೆ ಶಿಕ್ಷೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
