
Kerala; ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, May 30, 2023, 3:17 PM IST

ತ್ರಿಶೂರ್ (ಕೇರಳ): ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜಲಕುಡ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಂಗಳವಾರ(ಮೇ30) ನಡೆದಿದೆ.
ನಿಂತಿದ್ದ ಬಸ್‌ಗೆ ಇನ್ನೊಂದು ಬಸ್ ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡೂ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ತ್ರಿಶೂರ್‌ಗೆ ಕರೆದೊಯ್ಯಲಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ತಿಳಿಸಿದ್ದಾರೆ.
ಚಾಲಕನ ನಿರ್ಲಕ್ಷ್ಯ ಮತ್ತು ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವೇ ಎಂಬುದು ತನಿಖೆಯ ಬಳಿಕವಷ್ಟೇ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇರಿಜಂಲಕುಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ಮತ್ತೊಂದೆಡೆ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು 10 ಮಂದಿ ಸಾವಿಗೀಡಾದ ಘಟನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಜಜ್ಜರ್ ಕೋಟ್ಲಿ ಬಳಿ ಮಂಗಳವಾರ ಸಂಭವಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ

Manipal ಗಾಂಜಾ ಸೇವನೆ ಪ್ರಕರಣ: ಓರ್ವ ವಶಕ್ಕೆ

KVG ಶಿಕ್ಷಣ ಸಂಸ್ಥೆಗಳ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ- ಸಹೋದರ ಸೇರಿ 6 ಮಂದಿ ದೋಷಿ

Uppunda ನಕಲಿ ಸಹಿ ಮಾಡಿ ಹಣ ದುರುಪಯೋಗ: ನಿವೃತ್ತ ಸಿಇಒ, ನಿರ್ದೇಶಕ ವಿರುದ್ಧ ದೂರು ದಾಖಲು

Sept. 30: ಕಂಬಳ ಸಮಿತಿ ಸಭೆ: ದೇವಿಪ್ರಸಾದ ಶೆಟ್ಟಿ ಬೆಳಪು