ಜೀಪ್ ಪಲ್ಟಿಯಾಗಿ ಇಬ್ಬರು ಮಹಿಳೆಯರ ಸಹಿತ ಮೂವರ ಸಾವು
Team Udayavani, Mar 5, 2018, 12:37 PM IST
ಬಲ್ಲಿಯಾ, ಉತ್ತರ ಪ್ರದೇಶ : ಇಲ್ಲಿನ ರಸ್ದಾ ಪ್ರದೇಶದಲ್ಲಿ ಜೀಪ್ ಅಡಿ ಮೇಲಾಗಿ ಮಗುಚಿ ಬಿದ್ದ ಭೀಕರ ಅಪಘಾಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಮೃತಪಟ್ಟು ಇತರ ನಾಲ್ವರು ಗಾಯಗೊಂಡ ಘಟನೆ ವರದಿಯಾಗಿದೆ.
ಮೃತಪಟ್ಟವರನ್ನು ಮೇದಾಂತಿ ದೇವಿ 78, ಕಲಾವತಿ ದೇವಿ 50, ಚಾಲಕ ಧನಂಜಯ 32 ಎಂದು ಗುರುತಿಸಲಾಗಿದೆ. ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಚಾಲಕನಿಗೆ ಜೀಪ್ ಮೇಲೆ ನಿಯಂತ್ರಣ ತಪ್ಪಿ ಹೋದದ್ದೇ ಅವಘಡಕ್ಕೆ ಕಾರಣವಾಯಿತೆನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ