3,000 ಕೆಜಿ ಡ್ರಗ್ಸ್ ಹಿಂದೆ ಉಗ್ರರ ಕೈವಾಡ?
Team Udayavani, Sep 22, 2021, 6:40 AM IST
ಅಹ್ಮದಾಬಾದ್: ಇತ್ತೀಚೆಗಷ್ಟೇ ಗುಜರಾತ್ನ ಮುಂದ್ರಾ ಬಂದರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 3,000 ಕೆಜಿ ಹೆರಾಯಿನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ಐ)ದ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಇದರ ಹಿಂದೆ ಪಾಕ್ ಐಎಸ್ಐ ಕೈವಾಡವಿರುವ ಶಂಕೆ ಇದೆ.
ಇರಾನ್ನ ಅಬ್ಟಾಸ್ ಬಂದರಿನಿಂದ ಮುಂದ್ರಾ ಬಂದರಿಗೆ ಎರಡು ದೊಡ್ಡ ಕಂಟೇನರ್ಗಳಲ್ಲಿ ಡ್ರಗ್ಸ್ ಸಾಗಾಟ ಮಾಡಲಾಗುತ್ತಿತ್ತು. ಅಫ್ಘಾನ್ನಿಂದ ಆಂಧ್ರದ ವಿಜಯವಾಡದ ಆಶಿ ಟ್ರೇಡಿಂಗ್ ಕಂಪೆ ನಿಗೆ ಅದನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ಅದರ ಬೆಲೆ ಬರೋಬ್ಬರಿ 21,000 ಕೋಟಿ ರೂ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಭಾರತದಲ್ಲಿರುವ ಕೆಲವು ಅಫ್ಘಾನ್ ಪ್ರಜೆಗಳನ್ನೂ ಬಂಧಿಸಲಾಗಿದೆ. ಅವರು ಐಎಸ್ಐ ಜತೆ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಇದು ಭಾರತದಲ್ಲಿ ಉಗ್ರರಿಗೆ ನೆರವಾಗಲು ಪಾಕ್ ಐಎಸ್ಐ ಮಾಡಿರುವ ತಂತ್ರ ಎಂದು ಅನುಮಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ