
ಬೈಕುಲಾ ಜೈಲಿನಲ್ಲಿ ಆರು ಮಕ್ಕಳು ಸೇರಿದಂತೆ 39 ಕೈದಿಗಳಿಗೆ ಕೋವಿಡ್ ಪಾಸಿಟಿವ್
Team Udayavani, Sep 26, 2021, 11:34 AM IST

ಮುಂಬೈ: ಆರು ಮಕ್ಕಳು ಸೇರಿದಂತೆ 39 ಕೈದಿಗಳಿಗೆ ಕೋವಿಡ್ ಸೋಂಕು ದೃಢವಾದ ಘಟನೆ ಮುಂಬೈನ ಬೈಕುಲಾ ಜೈಲಿನಲ್ಲಿ ನಡೆದಿದೆ. ಕೋವಿಡ್ ಸೋಂಕಿತರನ್ನು ಐಸೋಲೇಶನ್ ಗಾಗಿ ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಲಾಗಿದೆ.
ಜೈಲಿನಲ್ಲಿದ್ದ ಗರ್ಭಿಣಿಯೊಬ್ಬರಿಗೂ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕುಲಾ ಕಾರಾಗ್ರಹದಲ್ಲಿ ಸುಮಾರು 120 ಮಂದಿ ಕೈದಿಗಳನ್ನು ಮತ್ತು ಸಿಬ್ಬಂದಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಬೃಹನ್ ಮುಂಬೈ ಪಾಲಿಕೆ ಹೇಳಿದೆ.
ಇದನ್ನೂ ಓದಿ:ದೇಶದಲ್ಲಿ 28,326 ಕೋವಿಡ್ ಪ್ರಕರಣಗಳು ಪತ್ತೆ; ಕೇರಳದಲ್ಲೇ 16,671 ಸೋಂಕು ಪ್ರಕರಣಗಳು!
ಜೈಲನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿಲ್ಲ ಎಂದು ಬಿಎಂಸಿಯ ಇ ವಾರ್ಡ್‌ನ ವೈದ್ಯಕೀಯ ಆರೋಗ್ಯ ಅಧಿಕಾರಿ ಹೇಳಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 28,326 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಶನಿವಾರ ವರದಿಯಾದ ಸೋಂಕು ಪ್ರಕರಣಗಳಿಗಿಂತ ರವಿವಾರ ಶೇ. 4.4 ಕಡಿಮೆ ಪ್ರಕರಣಗಳು ಪತ್ತೆಯಾಗಿದೆ. ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 3,35,31,498 ಗೆ ಏರಿಕೆಯಾಗಿದೆ.
ಈ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 260 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಸಾವಿನ ಸಂಖ್ಯೆ 4,46,918 ಗೆ ಏರಿಕೆಯಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
