ಟ್ರಕ್ – ಎಸ್ ಯುವಿ ಅಪಘಾತ: 18 ತಿಂಗಳ ಮಗು,ಒಂದೇ ಕುಟುಂಬದ ನಾಲ್ವರು ವೈದ್ಯರು ಮೃತ್ಯು
Team Udayavani, Feb 17, 2024, 11:44 AM IST
ಜೈಪುರ: ಟ್ರಕ್ ಹಾಗೂ ಎಸ್ಯುವಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 18 ತಿಂಗಳ ಮಗು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಿಕಾನೇರ್ನಲ್ಲಿ ಶುಕ್ರವಾರ(ಫೆ.16 ರಂದು) ನಡೆದಿದೆ.
ಭಾರತ್ಮಾಲಾ ಎಕ್ಸ್ಪ್ರೆಸ್ವೇಯಲ್ಲಿ ನೌರಂಗದೇಸರ್-ರಾಸಿಸ್ಸಾರ್ ಬಳಿ ಅಪಘಾತ ಸಂಭವಿಸಿದ್ದು, ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದ ಐದು ಜನರಲ್ಲಿ ನಾಲ್ವರು ವೈದ್ಯರಾಗಿದ್ದು, ಅವರನ್ನು ಡಾ. ಪ್ರತೀಕ್, ಅವರ ಪತ್ನಿ ಡಾ. ಹೇತಲ್, ಡಾ. ಪೂಜಾ ಮತ್ತು ಅವರ ಪತಿ ಡಾ. ಕರಣ್ ಎಂದು ಗುರುತಿಸಲಾಗಿದೆ. ಕರಣ್ ದಂಪತಿಯ ಮಗು ಪೂಜಾ(18 ತಿಂಗಳು) ಮೃತಪಟ್ಟಿದೆ. ಐವರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಮೃತರು ಗುಜರಾತ್ನ ಕಚ್ ನಿವಾಸಿಗಳಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಜಮ್ಮು-ಕಾಶ್ಮೀರದಿಂದ ಪ್ರವಾಸಕ್ಕೆಂದು ತೆರಳಿದ್ದ ಅವರು ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಘಟನೆಯ ಕುರಿತಯ ಕುಟುಂಬಸ್ಥರೊಗೆ ಮಾಹಿತಿಯನ್ನು ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು