ಛತ್ತೀಸ್ಗಢ: ನಕ್ಸಲರ ದಾಳಿಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯ
Team Udayavani, Apr 18, 2022, 8:32 PM IST
ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಪೊಲೀಸ್ ಶಿಬಿರದ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿರುವ ಘಟನೆ ಸೋಮವಾರ(ಎ.18) ನಡೆದಿದೆ.
ಕಟ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಜೈಗೂರ್ ಪೊಲೀಸ್ ಶಿಬಿರದ ಮೇಲೆ ರವಿವಾರ ತಡರಾತ್ರಿ ನಕ್ಸಲರ ಗುಂಪು ಗುಂಡಿನ ದಾಳಿ ನಡೆಸಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದ ನಂತರ ಬಂಡುಕೋರರು ಅಲ್ಲಿಂದ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಯಲ್ಲಿ ಮೂವರು ಜಿಲ್ಲಾ ಪೊಲೀಸ್ ಪಡೆಗೆ ಸೇರಿದವರು ಮತ್ತು ಇನ್ನೊಬ್ಬರು ಛತ್ತೀಸ್ಗಢ ಸಶಸ್ತ್ರ ಪಡೆ(ಸಿಎಎಫ್) ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಐಜಿ ಹೇಳಿದರು.
ಇದನ್ನೂ ಓದಿ:ಮಲ್ಟಿ ಲೆವೆಲ್ ಮಾರ್ಕೆಟಿಂಗ್:ಇಡಿಯಿಂದ ಆ್ಯಮ್ವೇ ಇಂಡಿಯಾಗೆ ಸೇರಿದ 757 ಕೋ. ರೂ ಆಸ್ತಿ ಜಪ್ತಿ
ಗಾಯಗೊಂಡ ಸಿಬ್ಬಂದಿಯನ್ನು ಬಿಜಾಪುರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಮತ್ತು ನಂತರ ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯ್ಪುರಕ್ಕೆ ಹೆಲಿಕಾಪ್ಟರ್ ನಲ್ಲಿ ರವಾನಿಸಲಾಗಿದ್ದು ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ