ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಕುಸಿತ; ನಾಲ್ವರು ಯೋಧರು ಹುತಾತ್ಮ, ಐವರು ನಾಗರಿಕರ ಸಾವು

ಸೋಮವಾರ ರಾತ್ರಿ 1ಗಂಟೆ ಸುಮಾರಿಗೆ ಸೇನಾ ಶಿಬಿರದ ಮೇಲೆ ಹಿಮದ ರಾಶಿ ಕುಸಿದು ಬಿದ್ದಿರುವುದಾಗಿ ವರದಿ ವಿವರಿಸಿದೆ.

Team Udayavani, Jan 14, 2020, 3:44 PM IST

ನವದೆಹಲಿ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಾಚಿಲ್ ಸೆಕ್ಟರ್ ಸಮೀಪ ಸಂಭವಿಸಿದ ಭಾರೀ ಹಿಮಕುಸಿತದಲ್ಲಿ ನಾಲ್ವರು ಯೋಧರು ಹಾಗೂ ಐವರು ನಾಗರಿಕರು ಮೃತಪಟ್ಟಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಯೋಧರೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.

ಸೋಮವಾರ ರಾತ್ರಿ 1ಗಂಟೆ ಸುಮಾರಿಗೆ ಸೇನಾ ಶಿಬಿರದ ಮೇಲೆ ಹಿಮದ ರಾಶಿ ಕುಸಿದು ಬಿದ್ದಿರುವುದಾಗಿ ವರದಿ ವಿವರಿಸಿದೆ. ಪ್ರತ್ಯೇಕ ಘಟನೆಯಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು ಕಾಶ್ಮೀರದ ನೌಗಾಮ್ ಸೆಕ್ಟರ್ ನಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಬಿಎಸ್ ಎಫ್ ಯೋಧ ಹುತಾತ್ಮರಾಗಿದ್ದರು. ಆರು ಮಂದಿ ಯೋಧರನ್ನು ರಕ್ಷಿಸಲಾಗಿತ್ತು. ಗಡಿನಿಯಂತ್ರಣ ರೇಖೆ ಬಳಿ ಗಡಿ ಭದ್ರತಾ ಪಡೆ ತೆರಳಿದ್ದು, ರಕ್ಷಣಾ ಕಾರ್ಯ ನಡೆಸಿರುವುದಾಗಿ ವರದಿ ತಿಳಿಸಿದೆ.

ಮತ್ತೊಂದು ಘಟನೆಯಲ್ಲಿ ಗಂದೆರ್ಬಾಲ್ ಜಿಲ್ಲೆಯ ಸೋನ್ ಮಾರ್ಗ್ ನಲ್ಲಿ ಭಾರೀ ಪ್ರಮಾಣದ ಹಿಮ ಕುಸಿತದಲ್ಲಿ ಒಂಬತ್ತು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಿಸಲಾಗಿದೆ. ಐವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಹಲವಾರು ಪ್ರದೇಶಗಳಲ್ಲಿ ಕಳೆದ 48ಗಂಟೆಗಳಲ್ಲಿ ಭಾರೀ ಪ್ರಮಾಣದ ಹಿಮಕುಸಿತ ಸಂಭವಿಸಿದ್ದು, ಹಲವಾರು ಯೋಧರನ್ನು ರಕ್ಷಿಸಲಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಹಿಮಕುಸಿತದೊಳಕ್ಕೆ ಸಿಲುಕಿದ್ದು, ಸ್ಥಳೀಯರು ಇಬ್ಬರನ್ನು ರಕ್ಷಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ