ಜನಪ್ರತಿನಿಧಿಗಳ ವಿರುದ್ಧ 4,122 ಕೇಸು ಇತ್ಯರ್ಥಕ್ಕೆ ಬಾಕಿ
Team Udayavani, Dec 5, 2018, 9:15 AM IST
ಹೊಸದಿಲ್ಲಿ: ದೇಶದಲ್ಲಿ ಹಾಲಿ ಹಾಗೂ ಮಾಜಿ ಶಾಸಕರು, ಸಂಸದರ ವಿರುದ್ಧ ಬರೋಬ್ಬರಿ 4,122 ಕ್ರಿಮಿನಲ್ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಉಳಿದಿವೆ ಎಂದು ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಲಾಗಿದೆ. 4,122ರ ಪೈಕಿ 2,324 ಕೇಸುಗಳು ಹಾಲಿ ಶಾಸಕರು ಮತ್ತು ಸಂಸದರ ವಿರುದ್ಧವಿದ್ದು, ಉಳಿದ 1,675 ಕೇಸುಗಳು ಮಾಜಿ ಜನಪ್ರತಿನಿಧಿಗಳ ವಿರುದ್ಧ ದಾಖಲಾದವುಗಳು. ಅಲ್ಲದೆ, ಇವುಗಳ ಪೈಕಿ 30 ವರ್ಷಗಳಷ್ಟು ಹಳೆಯ ಪ್ರಕರಣಗಳೂ ಸೇರಿವೆ ಎಂದು ಹಿರಿಯ ನ್ಯಾಯವಾದಿ ಹಾಗೂ ಅಮಿಕಸ್ ಕ್ಯೂರಿ ಆಗಿರುವ ವಿಜಯ್ ಹನ್ಸಾರಿಯಾ ಅವರು ಸುಪ್ರೀಂಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.
ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳನ್ನು ತ್ವರಿತ ಇತ್ಯರ್ಥಗೊಳಿಸಲು ವಿಶೇಷ ಕೋರ್ಟ್ ಸ್ಥಾಪನೆಗೆ ಸೂಚಿಸಿದ್ದ ಸುಪ್ರೀಂ ಕೋರ್ಟ್, ಇಂಥ ಪ್ರಕರಣಗಳ ವರದಿ ನೀಡುವಂತೆ ಅಮಿಕಸ್ ಕ್ಯೂರಿಗೆ ನಿರ್ದೇಶಿಸಿತ್ತು. ಅದರಂತೆ, ಮಂಗಳವಾರ ವರದಿ ಸಲ್ಲಿಕೆಯಾಗಿದೆ. ವಿಶೇಷ ಕೋರ್ಟ್ ಸ್ಥಾಪನೆಗೆ ಕೋರಿ ಹಾಗೂ ದೋಷಿ ಎಂದು ಸಾಬೀತಾದವರಿಗೆ ಚುನಾವಣೆಗೆ ಸ್ಪರ್ಧಿಸಲು ಜೀವಿತಾವಧಿ ನಿಷೇಧ ಹೇರುವಂತೆ ಕೋರಿ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಪಿಐಎಲ್ ಸಲ್ಲಿಸಿದ್ದರು. ವಿಚಾರಣೆ ವೇಳೆ, ಬಿಹಾರ ಮತ್ತು ಕೇರಳದ ಪ್ರತಿ ಜಿಲ್ಲೆಯಲ್ಲೂ ವಿಶೇಷ ಕೋರ್ಟ್ ಸ್ಥಾಪಿಸಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.
ಬಿಎಸ್ವೈ ವಿರುದ್ಧ 18 ಕೇಸು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ 18 ಪ್ರಕರಣಗಳು ವಿಚಾರಣೆಗೆ ಬಾಕಿಯಿವೆ. ಈ ಪೈಕಿ 14 ಕೇಸುಗಳು ಜೀವಾವಧಿ ಶಿಕ್ಷೆಗೆ ಒಳಗಾಗುವಂಥದ್ದು ಎಂದೂ ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ