ಜಮ್ಮು: ಮತ್ತೆ ಸಿಆರ್‌ಪಿಎಫ್ ಗುರಿ; ಐವರು ಹುತಾತ್ಮ

ಗಸ್ತು ತಿರುಗುತ್ತಿದ್ದ ವಾಹನದ ಮೇಲೆ ಫೈರಿಂಗ್‌

Team Udayavani, Jun 13, 2019, 5:10 AM IST

ಶ್ರೀನಗರ/ಹೊಸದಿಲ್ಲಿ: ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ದಾಳಿಯ ನೋವು ಆರುವ ಮುನ್ನ ಮತ್ತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ ನಡೆದಿದೆ. ಅನಂತನಾಗ್‌ ಜಿಲ್ಲೆಯ ಕೆ.ಪಿ. ರೋಡ್‌ನ‌ಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಸಿಆರ್‌ಪಿಎಫ್ನ ಐವರು ಯೋಧರು ಹುತಾತ್ಮರಾಗಿದ್ದಾರೆ.

ಮೋಟರ್‌ಸೈಕಲ್ನಲ್ಲಿ ಆಗಮಿಸಿದ ಇಬ್ಬರು ಉಗ್ರರು ಗಸ್ತು ತಿರುಗುವ ಕರ್ತವ್ಯದಲ್ಲಿ ನಿರತರಾಗಿದ್ದ ಯೋಧರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ಜತೆಗೆ ಗ್ರೆನೇಡ್‌ಗಳನ್ನೂ ಎಸೆದು ಪರಾರಿಯಾಗಿದ್ದಾರೆ. ಇತರ ಮೂವರು ಗಾಯಗೊಂಡಿದ್ದಾರೆ. ಅನಂತನಾಗ್‌ ಠಾಣೆಯ ಠಾಣಾಧಿಕಾರಿ ಅರ್ಶದ್‌ ಅಹ್ಮದ್‌ ಗಾಯಗೊಂಡವರಲ್ಲಿ ಸೇರಿದ್ದಾರೆ.

ಈ ಘಟನೆಯ ಬಳಿಕ ಪೊಲೀಸರು, ಸಿಆರ್‌ಪಿಎಫ್ ಮತ್ತು ಇತರ ಸೇನಾ ಸಿಬಂದಿ ತತ್‌ಕ್ಷಣ ಶೋಧ ಕಾರ್ಯ ಆರಂಭಿಸಿದರು. ಈ ಸಂದರ್ಭ ಉಗ್ರರ ಜತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರ ಪೈಕಿ ಒಬ್ಬನನ್ನು ಕೊಂದು ಹಾಕಲಾಗಿದೆ. ಇನ್ನೊಬ್ಬ ಉಗ್ರ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನಿಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಅಲ್ ಉಮರ್‌ ಮುಜಾಹಿದ್ದೀನ್‌ ಎಂಬ ಸಂಘಟನೆ ಕೃತ್ಯದ ಹೊಣೆ ಹೊತ್ತಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ