
ಅಯೋಧ್ಯೆ ಐತಿಹಾಸಿಕ ತೀರ್ಪು;ವಿವಾದಿತ ಜಮೀನು ರಾಮಲಲ್ಲಾ ಪಾಲು, ಐವರು ಜಡ್ಜ್ ಹೇಳಿದ್ದೇನು
Team Udayavani, Nov 9, 2019, 11:12 AM IST

ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿಗೆ ಸಂಬಂಧಿಸಿದ 2.77 ಎಕರೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪನ್ನು ಶನಿವಾರ ಪ್ರಕಟಿಸಿದ್ದು, ವಿವಾದಿತ ಜಮೀನು ರಾಮಲಲ್ಲಾ ಪಾಲಾಗಿದ್ದು, ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸಿದೆ.
134 ವರ್ಷಗಳಲ್ಲಿ ನಾನಾ ಹಂತದ ನ್ಯಾಯಾಲಯಗಳಳ್ಲಿ ವಿಚಾರಣೆಗೆ ಗುರಿಯಾಗಿದ್ದ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದದ ಕುರಿತು ಐವರು ಜಸ್ಟೀಸ್ ಗಳು ತೀರ್ಪನ್ನು ಘೋಷಿಸಿದ್ದಾರೆ.
ರಾಮಮಂದಿರ ನಿರ್ಮಾಣದ ಹೊಣೆ ಕೇಂದ್ರ ಸರ್ಕಾರಕ್ಕೆ ನೀಡಿದ್ದು, ರಾಮ ಮಂದಿರ ನಿರ್ಮಿಸಲು ನಿಯಮ ರೂಪಿಸಿ ಎಂದು ಸೂಚಿಸಿದೆ. ರಾಮಜನ್ಮಭೂಮಿಯ ಸ್ವಾಧೀನವನ್ನು ಟ್ರಸ್ಟ್ ಗೆ ನೀಡಬೇಕು. ಸುನ್ನಿ ವಕ್ಫ್ ಬೋರ್ಡ್ ಗೆ ಮಸೀದಿ ನಿರ್ಮಾಣಕ್ಕೆ ಅಯೋಧ್ಯೆಯಲ್ಲೇ ಸೂಕ್ತ ಸ್ಥಳ ನೀಡಬೇಕು ಎಂದು ಐತಿಹಾಸಿಕ ತೀರ್ಪು ನೀಡಿದೆ.
ಸುನ್ನಿ ವಕ್ಫ್ ಬೋರ್ಡ್ ಗೆ 5 ಎಕರೆ ಜಮೀನು ನೀಡಬೇಕು. 3 ತಿಂಗಳೊಳಗೆ ಟ್ರಸ್ಟ್ ರಚಿಸುವಂತೆ ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ನಿರ್ದೇಶನ ನೀಡಿದೆ. ಈ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿಸಿದೆ.
ವಿವಾದಿತ 2.77 ಎಕರೆ ಭೂಮಿ ರಾಮಮಂದಿರ ನಿರ್ಮಾಣಕ್ಕೆ ಸಿಕ್ಕಂತಾಗಿದೆ. ಪರ್ಯಾಯ ಜಮೀನಿನಲ್ಲಿ ಮಸೀದಿ ನಿರ್ಮಿಸಿದ್ದು ಸುನ್ನಿ ವಕ್ಫ್ ಬೋರ್ಡ್ ಗೆ ಬಿಟ್ಟಿದ್ದು ಎಂದು ಪೀಠ ಹೇಳಿದೆ.
ಉತ್ತರಪ್ರದೇಶ ಸರ್ಕಾರ ಮುಸ್ಲಿಮರಿಗೆ ಮಸೀದಿ ನಿರ್ಮಿಸಲು ಐದು ಎಕರೆ ಜಾಗವನ್ನು ನೀಡಬೇಕೆಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಕೇಂದ್ರ ಸರ್ಕಾರ ರಚಿಸಲಿರುವ ಟ್ರಸ್ಟ್ ನಲ್ಲಿ ನಿರ್ಮೋಹಿ ಅಖಾಡದ ಪ್ರತಿನಿಧಿಗೂ ಅವಕಾಶ ಕೊಡಬೇಕು. ಅಯೋಧ್ಯೆ ವಿವಾದದಲ್ಲಿ ನಿರ್ಮೋಹಿ ಅಖಾಡ ಮೂರನೇ ಪಾರ್ಟಿಯಾಗಿದೆ.
ವಿವಾದಿತ ಇಡೀ ಜಾಗ ತನ್ನ ಸುಪರ್ದಿಗೆ ಒಪ್ಪಿಸಬೇಕೆಂದು ಕೋರಿ ನಿರ್ಮೋಹಿ ಅಖಾಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಪೀಠ ವಜಾಗೊಳಿಸಿದೆ. ನಿರ್ಮೋಹಿ ಅಖಾಡ ಈ ಭೂಮಿಯ ರಕ್ಷಕ ಎಂದು ತಿಳಿಸಿದೆ.
ಕೇಂದ್ರ ಸರ್ಕಾರ ಬಾಬ್ರಿ ಮಸೀದಿ ಧ್ವಂಸಗೊಂಡ ಜಾಗದಲ್ಲಿ ರಾಮಮಂದಿರ ನಿರ್ಮಾಣದ ಕುರಿತಂತೆ ಮೂರು ತಿಂಗಳೊಳಗೆ ಟ್ರಸ್ಟ್ ರಚಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ವಿವಾದಿತ ಇಡೀ ಜಾಗ ತನ್ನ ಸುಪರ್ದಿಗೆ ಒಪ್ಪಿಸಬೇಕೆಂದು ಕೋರಿ ನಿರ್ಮೋಹಿ ಅಖಾಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಪೀಠ ವಜಾಗೊಳಿಸಿದೆ. ನಿರ್ಮೋಹಿ ಅಖಾಡ ಈ ಭೂಮಿಯ ರಕ್ಷಕ ಎಂದು ತಿಳಿಸಿದೆ.
ಕೇಂದ್ರ ಸರ್ಕಾರ ಬಾಬ್ರಿ ಮಸೀದಿ ಧ್ವಂಸಗೊಂಡ ಜಾಗದಲ್ಲಿ ರಾಮಮಂದಿರ ನಿರ್ಮಾಣದ ಕುರಿತಂತೆ ಮೂರು ತಿಂಗಳೊಳಗೆ ಟ್ರಸ್ಟ್ ರಚಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಅಯೋಧ್ಯೆಯಲ್ಲಿನ ವಿವಾದಿತ ಜಾಗದ ಕೆಳಭಾಗದಲ್ಲಿರುವ ಕುರುಹುಗಳು ಇಸ್ಲಾಂ ರಚನೆಯಲ್ಲಿ ಇಲ್ಲ. ಆದರೆ ಆರ್ಕಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ನೀಡಿರುವ ವರದಿಯಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿ ಮಸೀದಿ ನಿರ್ಮಿಸಲಾಗಿದೆ ಎಂಬ ಬಗ್ಗೆ ಖಚಿತತೆ ಇಲ್ಲ.
ಅಯೋಧ್ಯೆಯ ವಿವಾದಿತ ಜಾಗದಲ್ಲೇ ರಾಮನ ಜನ್ಮಸ್ಥಳ ಎಂಬುದು ಹಿಂದೂಗಳ ನಂಬಿಕೆಯಾಗಿದೆ. ಅದೇ ರೀತಿ ಮುಸ್ಲಿಮರು ಕೂಡಾ ಬಾಬ್ರಿ ಮಸೀದಿ ಬಗ್ಗೆ ನಂಬಿಕೆ ಹೊಂದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
