24 ಗಂಟೆಯಲ್ಲಿ 53,601 ಹೊಸ ಕೋವಿಡ್ ಪ್ರಕರಣಗಳು: 871 ಮಂದಿ ಸೋಂಕಿತರು ಸಾವು
Team Udayavani, Aug 11, 2020, 10:51 AM IST
ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 53,601 ಹೊಸ ಕೋವಿಡ್ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ದೇಶದ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 22,68,676ಕ್ಕೆ ಏರಿಕೆಯಾಗಿದೆ.
ಸೋಮವಾರ ಒಂದೇ ದಿನ ದೇಶದಲ್ಲಿ 871 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸೋಮವಾರ 114 ಮಂದಿ ಸೋಂಕಿತರು ಮರಣ ಹೊಂದಿದ್ದಾರೆ. ದೇಶದ ಒಟ್ಟು ಸೋಂಕಿತರ ಸಾವಿನ ಸಂಖ್ಯೆ 45,257ಕ್ಕೆ ಏರಿಕೆಯಾಗಿದೆ.
ದೇಶದ 22,68,676 ಮಂದಿ ಸೋಂಕಿತರ ಪೈಕಿ 6.4 ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. 15 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಸೋಮವಾರ 4267 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ಸದ್ಯ 79,908 ಸಕ್ರಿಯ ಪ್ರಕರಣಗಳಿವೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸೋಮವಾರ ಸಂಜೆ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರು.
ಅತೀ ಹೆಚ್ಚು ಕೋವಿಡ್ ಪೀಡಿತ ರಾಷ್ಟ್ರಗಳಾದ ಅಮೇರಿಕ ಮತ್ತು ಬ್ರೆಜಿಲ್ ದೇಶಗಳಿಗಿಂತ ವೇಗವಾಗಿ ದೇಶದಲ್ಲಿ ಕೋವಿಡ್ ಸೋಂಕು ಹಬ್ಬತ್ತಿದೆ. ದೇಶದಲ್ಲಿ ಕಳೆದ 24 ದಿನದಲ್ಲಿ 12 ಲಕ್ಷ ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!