ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ವಜಾ?
Team Udayavani, Apr 4, 2022, 7:10 AM IST
ಭೋಪಾಲ್: ಮಧ್ಯಪ್ರದೇಶದ ಶಾಲಾ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ 954 ಶಿಕ್ಷಕರಿಗೆ ಸರಕಾರದಿಂದ ನೋಟಿಸ್ ಜಾರಿಗೊಳಿಸಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
2001ರ ಜ. 26ರ ಅನಂತರ ಶಾಲಾ ಶಿಕ್ಷಣ ಸೇವೆಗೆ ಸೇರ್ಪಡೆಗೊಂಡ ಸಿಬಂದಿ ಯು ಕಡ್ಡಾಯವಾಗಿ ಎರಡು ಮಕ್ಕಳನ್ನು ಮಾತ್ರ ಹೊಂದತಕ್ಕದ್ದು. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಮಾಡಿಕೊಂಡಲ್ಲಿ ಸರ ಕಾರಿ ಸೇವೆಯಿಂದ ಅವರನ್ನು ಬಿಡುಗಡೆ ಮಾಡ ಲಾಗುತ್ತದೆ ಎಂದು 2000ರಲ್ಲಿ ಮಧ್ಯ ಪ್ರದೇಶ ಸರ ಕಾರ ಆದೇಶ ಹೊರಡಿಸಿತ್ತು. 2001ರ ಜ. 26ರ ಅನಂತರ ಶಾಲಾ ಶಿಕ್ಷಣ ಇಲಾಖೆಗೆ ಸೇರ್ಪಡೆಗೊಂಡಿರುವ ಎಲ್ಲ ಸಿಬಂದಿಯ ನೇಮಕಾತಿ ಆದೇಶದಲ್ಲಿ ಈ ವಿಚಾರವನ್ನು ಉಲ್ಲೇಖೀಸಲಾಗಿದೆ. ಅದರ ನ್ವಯ, ಸದ್ಯಕ್ಕೆ ವಿದಿಶಾ ಜಿಲ್ಲೆಯ 954 ಶಿಕ್ಷಕರಿಗೆ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಶಿಕ್ಷಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಅತುಲ್ ಮುದುಗಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ