54,736 ಹೊಸ ಕೋವಿಡ್ ಪ್ರಕರಣಗಳು; 17 ಲಕ್ಷ ದಾಟಿದ ದೇಶದ ಒಟ್ಟು ಸೋಂಕಿತರ ಸಂಖ್ಯೆ
Team Udayavani, Aug 2, 2020, 10:36 AM IST
ಹೊಸದಿಲ್ಲಿ: ದೇಶದಲ್ಲಿ ಮತ್ತೆ ಒಂದೇ ದಿನ 50 ಸಾವಿರಕ್ಕೂ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 17 ಲಕ್ಷ ದಾಟಿದೆ.
ಶನಿವಾರ ದೇಶದಲ್ಲಿ 54,736 ಮಂದಿಗೆ ಕೋವಿಡ್ -19 ಸೋಂಕು ತಾಗಿರುವುದು ದೃಢವಾಗಿದೆ. 24 ಗಂಟೆ ಅವಧಿಯಲ್ಲಿ 853 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದಾರೆ.
ದೇಶದ ಒಟ್ಟು ಸೋಂಕಿತರ ಸಂಖ್ಯೆ 17,50,723 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 11,45,629 ಮಂದಿ ಇದುವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ ಒಟ್ಟು 37,364 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಸಚಿವ ಕಮ್ಲಾ ರಾಣಿ ವರುಣ್ ಕೋವಿಡ್ ಸೋಂಕಿನ ಕಾರಣದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಪಂಜಾಬ್ ನಕಲಿ ಮದ್ಯ ದುರಂತಕ್ಕೆ 86 ಮಂದಿ ಬಲಿ: 25 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
ಕರ್ನಾಟಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಐದು ಸಾವಿರ ಮೇಲೇರಿದೆ. ಶನಿವಾರ ರಾಜ್ಯದಲ್ಲಿ 5172 ಮಂದಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,29,287 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 1852 ಮಂದಿ ಸೋಂಕಿತರು, ಮೈಸೂರಿನಲ್ಲಿ 365, ಬಳ್ಳಾರಿ 269, ಕಲಬುರಗಿ ಮತ್ತು ಬೆಳಗಾವಿಯಲ್ಲಿ ತಲಾ 219 ಪ್ರಕರಣಗಳು ದೃಢವಾಗಿದೆ.