ಭಿಲಾಯಿ ಉಕ್ಕಿನ ಕಾರ್ಖಾನೆಯಲ್ಲಿ  ಸ್ಫೋಟ:6 ಸಾವು,14 ಮಂದಿ ಗಂಭೀರ 

Team Udayavani, Oct 9, 2018, 2:50 PM IST

ರಾಯ್‌ಪುರ(ಛತ್ತೀಸ್‌ಗಡ ): ಇಲ್ಲಿಂದ 30 ಕಿ.ಮೀ ದೂರದಲ್ಲಿರುವ ಭಿಲಾಯಿ ಉಕ್ಕಿನ ಕಾರ್ಖಾನೆಯಲ್ಲಿ ಮಂಗಳವಾರ ಭೀಕರ ಸ್ಫೋಟ ಸಂಭವಿಸಿ 6 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದು , 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಕೋಕ್ ಓವನ್ ವಿಭಾಗದ ಗ್ಯಾಸ್‌ ಪೈಪ್‌ಲೈನ್‌ನಲ್ಲಿ ಸ್ಫೋಟ ಸಂಭವಿಸಿದ್ದು, ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಆದರೂ 6 ಮಂದಿ ಸಜೀವವಾಗಿ ದಹನಗೊಂಡಿದ್ದಾರೆ. 

ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕರವಾಗಿದೆ ಎಂದು ತಿಳಿದು ಬಂದಿದೆ. 

ದೇಶದ ಅತೀ ದೊಡ್ಡ ಉಕ್ಕು ಉತ್ಪಾದಕ ಘಟಕ ಎಂಬ ಖ್ಯಾತಿಯ ಆಧುನೀಕೃತ ಘಟಕವನ್ನು ಪ್ರಧಾನಿ ಮೋದಿ ಅವರು ಜೂನ್‌ ತಿಂಗಳಿನಲ್ಲಿ ಉದ್ಘಾಟಿಸಿದ್ದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ